ಬಂಟ್ವಾಳ: ಇನ್ನೋರ್ವ ಮಹಿಳೆಗೆ ಕೊರೋನಾ ಸೋಂಕು ದೃಢ
ಬಂಟ್ವಾಳ: ತಾಲ್ಲೂಕು ಕಸಬಾ ಗ್ರಾಮದ 67 ವರ್ಷದ ಮಹಿಳೆಯು ತೀವ್ರ ಉಸಿರಾಟದ ತೊಂದರೆಯಿಂದ ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆಗೆ ಕೊರೋನಾ ಸೋಂಕು ದೃಡಪಟ್ಟಿದೆ.
ಇವರ ಗಂಟಲು ದ್ರವ ಮಾದರಿಯನ್ನು ಎ.18 ರಂದು ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷಾ ವರದಿ ಸ್ವೀಕೃತಗೊಂಡಿದ್ದು, ಇವರಲ್ಲಿ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿರುತ್ತದೆ.
ಈ ಮಹಿಳೆಯು ಎ.19 ರಂದು ಬಂಟ್ವಾಳದಲ್ಲಿ ಮೃತಪಟ್ಟ ಮಹಿಳೆಯ ನೆರಮನೆಯವರಾಗಿರುತ್ತಾರೆಂದು ತಿಳಿದುಬಂದಿರುತ್ತದೆ.