ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ
ಬಂಟ್ವಾಳ: ಯುವತಿಯೊರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಮದುವೆಗೆ ನಿರಾಕರಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಮೊಹಮ್ಮದ್ ಅಝರುದ್ದಿನ್ (28 ) ಬಂಧಿತ ಆರೋಪಿಯಾಗಿದ್ದಾನೆ. ಈತ ಯುವತಿಯೋರ್ವಳೊಂದಿಗೆ ಕೆಲ ವರ್ಷಗಳಿಂದ ಗೆಳೆತನದಲ್ಲಿದ್ದು, ಮದುವೆಯಾಗುವುದಾಗಿ ನಂಬಿಸಿ ಆಕೆಗೆ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಆರೋಪಿಯು ಮದುವೆಗೆ ನಿರಾಕರಿಸಿದ್ದಲ್ಲದೆ ಸಂತ್ರಸ್ಥ ಯುವತಿಯೊಂದಿಗಿದ್ದ ಪೋಟೊವನ್ನು ಎಲ್ಲರಿಗೂ ರವಾನಿಸಿ ಯುವತಿಯ ಮಾನ ತೆಗೆಯುವುದಾಗಿ ಬೆದರಿಸಿದ್ದನೆಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸರು ಕೇಸು ದಾಖಲಿಸಿ,ಆರೋಪಿಯನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು,ಈತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.