ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜಯಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮದ ಉದ್ಘಾಟನೆ

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜಯಂತಿಯ ಪ್ರಯುಕ್ತ  ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯವರು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಹಮ್ಮಿ ಕೊಂಡಿರುವ ಭಜನಾ ಕಾರ್ಯಕ್ರಮವನ್ನು ಪರ್ಯಾಯ ಶ್ರೀ ವಿದ್ಯಾಧೀಶ  ತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಯಶಪಾಲ್ ಸುವರ್ಣ,ಗೋಪಾಲ್ ಕುಂದರ್,ಭಾಸ್ಕರ ಕಿದಿಯೂರು,ಶಿವರಾಮ ಅಂಬಲ್ಪಾಡಿ,ಸಿ.ಸಿ.ಕರ್ಕೇರ,ಭೋಜರಾಜ್ ಕಿದಿಯೂರು,ಸುಧಾಕರ ಮೆಂಡನ್,ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು.

Leave a Reply

Your email address will not be published. Required fields are marked *

error: Content is protected !!