“ಭಾರತ್ ಬಂದ್” ಹಿನ್ನೆಲೆ ಉಡುಪಿಯಲ್ಲಿ 144 ಸೆಕ್ಷನ್- ಜಿಲ್ಲಾಧಿಕಾರಿ

ಉಡುಪಿ ; ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಇಂದು (ಗುರುವಾರ) ವಿವಿಧ ಸಂಘಟನೆಗಳು ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಮುಂಜಾಗರೂಕ ಕ್ರಮವಾಗಿ ಇಂದಿನಿಂದ 21ರವರೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ನನ್ವಯ ಜಿಲ್ಲಾಧಿಕಾರಿ ಅವರು ನಿಷೇದಾಜ್ಞೆ ಹೊರಡಿಸಿದ್ದಾರೆ. 

ಜಿಲ್ಲೆಯಲ್ಲಿರುವ ಕೆಲವು ಸೂಕ್ಷ ಪ್ರದೇಶಗಳಲ್ಲಿ ಬಂದ್ ಹಿನ್ನೆಲೆಯಲ್ಲಿ ಮೆರವಣಿಗೆ, ಪ್ರತಿಭಟನೆಗಳನ್ನು ನಡೆಸಿದರೇ ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಗೆ ಭಂಗ ಬರುವ ಬಗ್ಗೆ ಪೊಲೀಸ್ ವರಿಷ್ಛಾಧಿಕಾರಿ ಅವರ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಇಂದು ಬೆಳಿಗ್ಗೆ 6 ಗಂಟೆಯಿಂದ 21ರ ರಾತ್ರಿ 11 ಗಂಟೆಯವರೆಗೆ ಈ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.  ಆದರೇ ಶವಯಾತ್ರೆ, ಮದುವೆ ಮತ್ತು ಪೂರ್ವಾನುಮತಿಯಿಂದ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ಈ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!