ಭಟ್ಕಳ:ಲಾಡ್ಜ್ ಗೆ ಕರೆದು ಯುವಕನ ಬರ್ಬರ ಹತ್ಯೆ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾನುಭಾಗ್ ಡಿಲಕ್ಸ್ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ, ಆರೋಪಿಗಳು ಪರಾರಿಯಾಗಿದ್ದಾರೆ.

ಮುಗಳಿಹೊಂಡದ ಸಫ್ಹಾನ್ ಯಾನೆ ನವರಂಗ್ ಮಹಮ್ಮದ್ ಅಲಿ (26) ಕೊಲೆಗೀಡಾದವ. ಐವರು ಶನಿವಾರ ರಾತ್ರಿ ಶಾನುಭಾಗ್ ಡಿಲಕ್ಸ್ ವಸತಿಗೃಹದಲ್ಲಿ ಕೊಠಡಿ ಪಡೆದು ಬಹಳ ಸಮಯದವರೆಗೆ ಮಾತುಕತೆ ನಡೆಸುತ್ತಿದ್ದರು. ಇದ್ದಕ್ಕಿದ್ದಂತೆ ಅವರು ಅಲ್ಲಿಂದ ಹೊರಬಂದು ಓಡಿ ಪರಾರಿಯಾಗಲು ಯತ್ನಿಸುತ್ತಿದ್ದಾಗ, ಆರೋಪಿಗಳಲ್ಲಿ ಒಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಿಸಿಟಿವಿ ದ್ರಶ್ಯ ವಶಕ್ಕೆ ಪಡೆದು ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಯಾವುದೋ ವ್ಯವಹಾರದ ವಿಷಯದಲ್ಲಿ ಭಿನ್ನಾಭಿಪ್ರಾಯ ಮೂಡಿ, ಅದು ಕೊಲೆಯಲ್ಲಿ ಅಂತ್ಯಗೊಂಡಿರಬಹುದು ಎಂದು ಶಂಕಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!