ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಂಟ್ವಾಳದಲ್ಲಿ ಅಭಿನಂದನೆ

ಬಂಟ್ವಾಳ:  63 ಪಕ್ಷಗಳು ಜಾತಿ‌ ಅಥವಾ ವಂಶಾಧಾರಿತವಾದ ಪಕ್ಷಗಳಾಗಿದ್ದು, ರಾಷ್ಟ್ರೀಯ ವಿಚಾರಧಾರೆ,ಕಾರ್ಯಬದ್ದತೆಯಾಧಾರದಲ್ಲಿ ಸಂಘಟನಾ ಪಕ್ಷವೊಂದಿದ್ದರೆ ಅದು ಬಿಜೆಪಿ ಮಾತ್ರ ಎಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಶುಕ್ರವಾರ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಸೇವಾ ಸಪ್ತಾಹದ ಅಂಗವಾಗಿ ಎ‌.ಜೆ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ   ಅವರಿಗೆ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ


ಸನ್ಮಾನ ಸ್ವೀಕರಿಸಿ ‌ ಅವರು   ಮಾತನಾಡುತ್ತಿದ್ದರು. ಬಿಜೆಪಿ ಬೇರೆ ಪಕ್ಷಕ್ಕಿಂತ ವಿಭಿನ್ನವಾಗಿದ್ದು,ಜಗತ್ತಿನಲ್ಲಿಯೇ ವಿಶಿಷ್ಠ ಸ್ಥಾನದೊಂದಿಗೆ ಗುರುತಿಸಲ್ಪಟ್ಟಿದೆ.ರಾ.ಸ್ವ.ಸೇ.ಸಂಘದ ಸಂಸ್ಕಾರ ಪಡೆದ ಸಾಮಾನ್ಯ ಕಾರ್ಯಕರ್ತನೊಬ್ಬ ರಾಷ್ಟ್ರಸ್ಥಾನಕ್ಕೇರಲು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದ ಅವರು ಬಿಜೆಪಿ ಕಾರ್ಯಕರ್ತರು ದೇಶಕ್ಕಾಗಿ ದುಡಿಯವವರು ಎಂದು ಹೇಳಿದರು. ರಾಜ್ಯಾಧ್ಯಕ್ಷನಾದ 28 ದಿನಗಳಲ್ಲಿ ಈಗಾಗಲೇ 26 ಜಿಲ್ಲೆಯಲ್ಲಿ ಪ್ರವಾಸಮಾಡಿ ಪಕ್ಷದ ಸಂಘಟನೆಗೆ ಪ್ರೇರೆಪಿಸಲಾಗಿದೆ.

ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಸೆ.30 ರೊಳಗಾಗಿ ಕ್ಷೇತ್ರದಲ್ಲಿ ಸದಸ್ಯತ್ವವನ್ನು ಹೆಚ್ಚಿಸುವುದರ ಜೊತೆಗೆ ಗ್ರಾಮ ಸಮಿತಿಯನ್ನು ರಚಿಸಿ ರಾಜ್ಯ ಸಮಿತಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು. ಕಾಶ್ಮೀರದಲ್ಲಿ 370ರ ವಿಧಿಯನ್ನು    ರದ್ದುಗೊಳಿಸಲು ಬಿಜೆಪಿಗೆ ಬಹುಮತ ಸಿಗುವವರೆಗೆ ಕಾಯಬೇಕಾಯಿತು.ಮುಂದಿನ ದಿನದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗುವ ದಿನ ದೂರ ಇಲ್ಲ ಎಂದರು. ನನಗೆ ಸಿಕ್ಕಿರುವ ಹುದ್ದೆಯನ್ನು ಜವಬ್ದಾರಿಯಿಂದ ನಿರ್ವಹಿಸುವುದಾಗಿ ಹೇಳಿದ ಅವರು ಕಾಂಗ್ರೆಸ್,ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ಕಾರಣ ಬಿಜೆಪಿ ಅಧಿಕಾರಕ್ಕೆ ಬರುವಂತಾಗಿದೆ.ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕು ಅಧಿಕಸ್ಥಾನ ಗೆಲ್ಲುವ ಗುರಿಯೊಂದಿಗೆ ಸ್ವಂತಬಲದಲ್ಲಿ ಸರಕಾರ ರಚಿಸುವ ನಿಟ್ಟಿನಲ್ಲಿ ಬಂಟ್ವಾಳದ ಈ ಸಭೆ ಪ್ರೇರಪಣೆಯಾಗಲಿ ಎಂದರು.
  ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮಾತನಾಡಿ, ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಹಿರಿಯರು ಗುರುತಿಸುತ್ತಾರೆ ಎಂಬುದಕ್ಕೆ ನಳಿನ್ ಕುಮಾರ್ ಕಟೀಲ್ ಅವರೇ ಸಾಕ್ಷಿಯಾಗಿದ್ದಾರೆ.ಅವರು ಈ ಸಾಧನೆಯ ಹಿಂದೆ ಅಪಾರವಾದ ಶ್ರಮವಿದೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ,ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ,ಯಡಿಯೂರಪ್ಪ ಸರಕಾರ ಅಸ್ತಿತ್ವಕ್ಕೆ ಬಂದು ಸಚಿವರ ಆಯ್ಕೆಯಾದರೂ,ವಿಪಕ್ಷಗಳಿಗೆ ಇನ್ನು ವಿಪಕ್ಷನಾಯಕನ ಆಯ್ಕೆ ಇನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದ ಅವರು,ಭ್ರಷ್ಠಾಚಾರಿಯನ್ನು ಪಕ್ಚದಿಂದ ಕಿತ್ತೊಗೆಯುವ ಬದಲು ಅವರಿಗೆ ಬೆಂಬಲವಾಗಿ ನಿಂತು ಪ್ರತಿಭಟನೆ ಮಾಡಿಸುವಂತ ಕೀಳುಮಟ್ಟದ ರಾಜಕಾರಣಕ್ಕೆ ವಿಪಕ್ಷ ಮುಂದಾಗಿರುವುದು ನಾಚಿಗೇಡಿನ ಸಂಗತಿ ಎಂದರು‌
ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವದಾಸ್
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಭಿನಂದನಾ ಭಾಷಣಗೈದರು.
ವಿಭಾಗದ ಪ್ರಭಾರಿ ಉದಯಕುಮಾರ್ ಶೆಟ್ಟಿ ಉಡುಪಿ,ಮಾಜಿ ಶಾಸಕರಾದ ಎ.ರುಕ್ಮಯಪೂಜಾರಿ,ಪದ್ಮನಾಭಕೊಟ್ಟಾರಿ, ರಾಜ್ಯಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್ ,   ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಪುತ್ತೂರು,ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ,ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಕ್ಯಾ.ಬ್ರಿಜೇಶ್ ಚೌಟ. ಕಿಶೋರ್ ರೈ,ಉಪಾಧ್ಯಕ್ಷ ಜಿ.ಆನಂದ ,ಜಿಪಂ ಸದಸ್ಯ ತುಂಗಪ್ಪ ಬಂಗೇರ,  ಎ.ಜೆ.ಆಸ್ಪತ್ರೆಯ ರಕ್ತನಿಧಿ ಅಧಿಕಾರಿ ಡಾ.ಅರವಿಂದ್ ಉಪಸ್ಥಿತರಿದ್ದರು.  ಬಂಟ್ವಾಳ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಸ್ವಾಗತಿಸಿದರು.ಉಪಾಧ್ಯಕ್ಷ ದೇವಪ್ಪ ಪೂಜಾರಿ ವಂದಿಸಿದರು.ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ ನಿರೂಪಿಸಿದರು.ಇದೇ ವೇಳೆ    ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ   ಸೇವಾ ಸಪ್ತಾಹದ ಪ್ರಯುಕ್ತ ಮಂಗಳೂರು ಎ.ಜೆ.ಆಸ್ಪತ್ರೆಯ ಸಹಯೋಗದಲ್ಲಿ  ರಕ್ತದಾನ ಶಿಬಿರವು ನಡೆಯಿತು.ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,ಶಾಸಕ ರಾಜೇಶ್ ನಾಯ್ಕ್ ಅವರು ಶಿಬಿರಕ್ಕೆ ಭೇಟಿ ನೀಡಿದರು.

Leave a Reply

Your email address will not be published. Required fields are marked *

error: Content is protected !!