ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಇನ್ನಿಲ್ಲ

ಮುಂಬೈ: ತೀವ್ರ ಅನಾರೋಗ್ಯದಿಂದಾಗಿ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ.

ಈ ಕುರಿತು ಸ್ವತಃ ಅವರ ಸಹೋದರ ರಣಧೀರ್ ಕಪೂರ್ ಅವರೇ ಅಧಿಕೃತ ಮಾಹಿತಿ ನೀಡಿದ್ದಾರೆ. ರಿಷಿ ಕಪೂರ್ ಅವರು ಮುಂಬೈನ ಹೆಚ್ಎನ್ ರಿಯಲಯನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರಿಗ ಉಸಿರಾಟ ಸಮಸ್ಯೆಯಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಫೆಬ್ರವರಿ ತಿಂಗಳಿನಲ್ಲಿಯೂ ರಿಷಿ ಕಪೂರ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ರಿಷಿ ಅವರು ಮೊದಲ ಬಾರಿಗೆ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೆಲ ಸೋಂಕಿನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿತ್ತು. 

Leave a Reply

Your email address will not be published. Required fields are marked *

error: Content is protected !!