ಬಾಂಬರ್ ಆದಿತ್ಯ ರಾವ್ ಶರಣು

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಶರಣಾಗಿದ್ದಾನೆ.

ಮಣಿಪಾಲ ಮೂಲದ ಆದಿತ್ಯ ರಾವ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಆದಿತ್ಯರಾವ್ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕಚೇರಿಗೆ ಆಗಮಿಸಿ ಶರಣಾಗಿದ್ದ. ಈಗ ಪೊಲೀಸರು ಈತನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.


ಉಡುಪಿಯ ಮಣಿಪಾಲ ಮೂಲದ ಎಂಜಿನಿಯರ್ ಆಗಿರುವ ಆದಿತ್ಯರಾವ್ ಈ ಹಿಂದೆಯೂ ಹುಸಿಬಾಂಬ್ ಕರೆ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ. 2012ರಲ್ಲಿ ಖಾಸಗಿ ಬ್ಯಾಂಕ್ ಕೆಲಸ ಮಾಡಿದ್ದ ಈತ ಬೆಂಗಳೂರಿನಲ್ಲಿ ಈ ಹಿಂದೆ ರೈಲ್ವೇ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಹಾಕಿದ್ದ. ಹುಸಿಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಜೈಲುವಾಸ ಅನುಭವಿಸಿದ್ದ. ಕೆಲಸ ಸಿಗದೇ ಮಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ 

Leave a Reply

Your email address will not be published. Required fields are marked *

error: Content is protected !!