ಉಡುಪಿ: ಮೀನುಗಾರಿಕೆ, ಕೃಷಿ ಆಧಾರಿತ ಉದ್ಯಮಕ್ಕೆ ಒತ್ತು-ಉಸ್ತುವಾರಿ ಬೊಮ್ಮಯಿ
ಉಡುಪಿ: ಜಿಲ್ಲೆಯಲ್ಲಿ64 ನೇ ವರ್ಷದ ಕನ್ನಡ ರಾಜ್ಯೋತ್ಸವದ ಆಚರಣೆ ಜಿಲ್ಲಾ ಮಾಹತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯ ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಯಿ ರಾಷ್ಷ್ರ ಧ್ವಜಾರೋಹಣ ನೆರವೆರಿಸಿದರು.
ಜಿಲ್ಲೆಯ ಜನರ ಸಾಹಸ ಪ್ರವೃತ್ತಿಯನ್ನು ಬಂಡವಾಳವಾಗಿಸಿಕೊಂಡು ಮೀನುಗಾರಿಕೆ, ಕೃಷಿ ಆಧಾರಿತ ಉದ್ಯಮಗಳನ್ನು ಬೆಳೆಸಲು ಸರ್ಕಾರ ಮುಂದಾಗಿದೆ ಎಂದು ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಸಂದೇಶ ನೀಡಿದರು.
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಅವರು ಕರಾವಳಿಯ ಶ್ರೀಮಂತ ಕಲೆ ಯಕ್ಷಗಾನದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲೂ ಕನ್ನಡ ಭಾಷೆ ಬೆಳವಣಿಗೆ ಕಂಡಿದೆ ಎಂದರು.
ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲಿನಲ್ಲೇ ನೆರೆ ಹಾವಳಿ ಸವಾಲನ್ನು ಎದುರಿಸಿದೆ. ಕರಾವಳಿ ಭಾಗದಲ್ಲಿ ನೆರೆಯಿಂದ ಹಾನಿಯಾದ ಮೀನುಗಾರರಿಗೂ ಪರಿಹಾರ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗಿದೆ. ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು ಸೆಳೆಯಲು ಟೂರಿಸಂ ಟಾಸ್ಕ್‌ಫೋರ್ಸ್ ರಚನೆ ಮಾಡಲು ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುವುದು. ಟೆಂಪಲ್ ಮತ್ತು ಕೋಸ್ಟಲ್ ಟೂರಿಸಂನಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ ಎಂದರು
ಸಮಾರಂಭದಲ್ಲಿ ಶಾಸಕರಾದ ವಿ. ಸುನಿಲ್ ಕುಮಾರ್. ಕೆ.ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು,ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿ.ಪಂ. ಸಿಇಒ ಪ್ರೀತಿ ಗೆಹ್ಲೋಟ್, ಎಸ್‌ಪಿ. ನಿಶಾ ಜೆಮ್ಸ್ ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ 30 ಮಂದಿ ಸಾಧಕರನ್ನು ಸನ್ಮಾನಿಸಲಾಯಿತು ಹಾಗೂ ಎರಡು ಸಂಘ ಸಂಸ್ಥೆಯ ಕಾರ್ಯಚಟುವಟಿಕೆಯ ಗುರುತಿಸಿ ಗೌರವಿಸಲಾಯಿತು