ಬ್ರಹ್ಮಾವರ ಪೃಥ್ವಿ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿ ದೋಷ ಮುಕ್ತಿ

ಉಡುಪಿ: ಸುಮಾರು ಎಂಟು ವರ್ಷಗಳ ಹಿಂದೆ   ರಾಷ್ಟ್ರಮಟ್ಟಕ್ಕೆ ಅಥ್ಲೆಟಿಕ್ ಕೀಡೆಗೆಆಯ್ಕೆಯಾಗಿದ್ದ ಬ್ರಹ್ಮಾವರದ ಅಂಪರು ಅನಿವಾಸಿ ಪೃಥ್ವಿ ಪೂಜಾರಿ(೧೭) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಯನ್ನು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ದೋಷ ಮುಕ್ತಿಗೊಳಿಸಿ ಆದೇಶ ನೀಡಿದೆ .ಸುಮಾರು ಎಂಟು ವರ್ಷಗಳ ಹಿಂದೆ ರಾಷ್ಟ್ರೀಯ ಕ್ರೀಡಾಪಟು ಪೃಥ್ವಿ ಪೂಜಾರಿ ಅವರು ಪೊಲ್ ವಾಲ್ಟ್ ನಡೆಯಲಿದ್ದ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಳು.

ಬ್ರಹ್ಮಾವರ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಇಕೆ 2011 ಸೆಪ್ಟೆಂಬರ್ 27ರಂದು ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಸಂದರ್ಭ ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೊಟ್ ಬರೆದಿದ್ದಳು. ಇದರಲ್ಲಿ ಬ್ರಹ್ಮಾವರದ ಆಕಾಶವಾಣಿ ಬಳಿಯ ನಿವಾಸಿ ಮಿಸ್ಬಾನ್  ಹುಸೇನ್  ನನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಇದರಿಂದ ನಾನು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆ ಬರೆದಿದ್ದ ಪತ್ರದಲ್ಲಿ ಇತ್ತು. ಈ ಘಟನೆಗೆ ಉಡುಪಿ ಜಿಲ್ಲೆಯಾದ್ಯಂತ ಬಹಳ ಆಕ್ರೋಶ ವ್ಯಕ್ತವಾಗಿ ಪ್ರತಿಭಟನೆ ಕೂಡ ನಡೆದಿತ್ತು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮಿಸ್ಬಾ ಹುಸೇನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೇಸು ದಾಖಲಿಸಲಾಗಿತ್ತು. ಆಗಿನ ಕುಂದಾಪುರ ಸಹಾಯಕ ಪೊಲೀಸ್ ಅಧೀಕ್ಷಕ ಡಾ. ಎಚ್. ರಾಮ್ ನಿವಾಸ್ ಸೆಪಟ್ ಇದರ ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸುದೀರ್ಘವಾಗಿ ನ್ಯಾಯಾಲಯದ ವಿಚಾರಣೆ ಬಳಿಕ 24 ಸಾಕ್ಷಿಗಳ ವಿಚಾರಣೆ ನಡೆಸಿದ ಉಡುಪಿ ಜಿಲ್ಲಾ ನ್ಯಾಯಾಧೀಶರಾದ ಸಿ.ಎಂ ಜೋಷಿ ಆರೋಪಿ ವಿರುದ್ಧ ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಆರೋಪಿ ಪರ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ವಾದ ಮಂಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!