ಪೇಜಾವರ ಶ್ರೀಗಳ ಮಿದುಳು ನಿಷ್ಕ್ರಿಯ: ಮುಖ್ಯಮಂತ್ರಿ ಆಸ್ಪತ್ರೆಗೆ ದೌಡು

ಉಡುಪಿ: ‘ಪೇಜಾವರ ಶ್ರೀಗಳ ಮಿದುಳು ಸರಿಯಾಗಿ ಕೆಲಸ ಮಾಡುತ್ತಿಲ್ಲ, ಪರಿಸ್ಥಿತಿ ತೀರಾ ಗಂಭೀರವಾಗಿದೆ’ ಎಂದು ಮಣಿಪಾಲದ ವೈದ್ಯರು ತಿಳಿಸಿದ್ದಾರೆ.

ಶ್ರೀಗಳ ಆರೋಗ್ಯ ಸ್ಥಿತಿ ಸುಧಾರಿಸುವ ಲಕ್ಷಣಗಳು ತೋರುತ್ತಿಲ್ಲ. ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯು ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದೆ. ‘ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಮತ್ತಷ್ಟು ಕ್ಷೀಣಿಸಿದೆ. ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ನಡೆಸಿದ ಪರೀಕ್ಷೆಗಳ ಪ್ರಕಾರ ಮಿದುಳು ತೀವ್ರ ನಿಷ್ಕ್ರಿಯವಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!