ಪೌರ ಕಾರ್ಮಿಕರಿಗೆ ಮನೆ ನಿರ್ಮಾಣ : ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ನಿರ್ದೇಶನ

ಮಡಿಕೇರಿ: ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಕರ್ಣಂಗೇರಿಯಲ್ಲಿ ಮನೆ ನಿರ್ಮಾಣ ಮಾಡಲು ಕಾಯ್ದಿರಿಸಿದ ಜಾಗದ ಬದಲಿಗೆ ಬೇರೆ ಪ್ರದೇಶದಲ್ಲಿ ಬದಲಿ ಜಾಗವನ್ನು ಗುರುತಿಸಿ ೧೧ ಪೌರಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರಾದ ರಮೇಶ್ ಅವರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್‌ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿ ನಡೆದ ಸಭೆಯ ಅನುಪಾಲನಾ ವರದಿಯ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಇರುವ ಸವಲತ್ತಿನಡಿ ವಿದ್ಯಾವಂತ ಪೌರ ಕಾರ್ಮಿಕರ ಮಕ್ಕಳಿಗೆ ಉದ್ಯೋಗಕ್ಕೆ ಅಗತ್ಯಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪೌರ ಕಾರ್ಮಿಕರಿಂದ ನಗರದಲ್ಲಿ ಹಸಿ ಕಸ, ಒಣ ಕಸ ಶೇಖರಣೆ ಹಾಗೂ ವಿಂಗಡಣೆ ಬಗ್ಗೆ ಮಾಹಿತಿ ಪಡೆದು ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ, ಆರೋಗ್ಯ ಸೌಲಭ್ಯ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದರು. ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿ ಅವರ ಸಮಸ್ಯೆಗಳನ್ನು ತುರ್ತಾಗಿ ಪರಿಶೀಲಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಪೌರಾಯುಕ್ತರಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!