ಉಪಚುನಾವಣೆಯ:ಬಿಜೆಪಿ 10, ಕಾಂಗ್ರೆಸ್,ಜೆಡಿಎಸ್ 2 ಅಭ್ಯರ್ಥಿಗಳ ಮುನ್ನಡೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.
ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್.ಪೇಟೆ ಮತ್ತು ಹುಣಸೂರು ಕ್ಷೇತ್ರದಲ್ಲಿ ಕಳೆದ ಗುರುವಾರ ಮತದಾನ ನಡೆದಿತ್ತು. ಈ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು.
ಇದರಂತೆ ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, 11 ಗಂಟೆ ಹೊತ್ತಿಗೆ ಆಯಾ ಕ್ಷೇತ್ರಗಳಲ್ಲಿ ಯಾರು ಗೆಲ್ಲಬಲ್ಲರು ಎಂಬುದರ ಸ್ಪಷ್ಟ ಚಿತ್ರಣ ಬಹಿರಂಗಗೊಳ್ಳಲಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಅಧಿಕೃತ ಚಿತ್ರಣ ತಿಳಿದುಬರಲಿದೆ. ಹೀಗಾಗಿ ಅನರ್ಹ ಶಾಸಕರಲ್ಲಿ ಆಂತಕ ಮತ್ತು ಕುತೂಹಲ ಹೆಚ್ಚಿದೆ.
ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ 2 ಸಾವಿರದ 120 ಮತಗಳ ಅಂತರದಲ್ಲಿ ಮುನ್ನಡೆ .
ಉಪ ಚುನಾವಣೆ ಫಲಿತಾಂಶದ ಮತ ಎಣಿಕೆಯ ಇತ್ತೀಚಿನ ಫಲಿತಾಂಶದಂತೆ ಬಿಜೆಪಿ ಯಲ್ಲಾಪುರ, ಚಿಕ್ಕಬಳ್ಳಾಪುರ, ವಿಜಯನಗರ, ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರಗಳಲ್ಲಿ, ಶಿವಾಜಿನಗರ ಮತ್ತು ಹುಣಸೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಕೆ ಆರ್ ಪೇಟೆ ಮತ್ತು ಯಶವಂತಪುರಗಳಲ್ಲಿ ಜೆಡಿಎಸ್ ಮತ್ತು ಹೊಸಕೋಟೆಯಲ್ಲಿ ಸ್ವತಂತ್ರ ಅಭ್ಯರ್ಥಿ ಎಸ್ ಕೆ ಶರತ್ ಬಚ್ಚೇಗೌಡ ಮುನ್ನಡೆಯಲ್ಲಿದ್ದಾರೆ.
ಯಲ್ಲಾಪುರ ಕ್ಷೇತ್ರದ 6ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಮುನ್ನಡೆ ಸಾಧಿಸಿದ್ದಾರೆ. ಇನ್ನು, ಹುಣಸೂರಿನಲ್ಲಿ ಮೂರನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್‌ನ ಜವರಾಯಿಗೌಡ ಮುನ್ನಡೆ ಸಾಧಿಸಿದ್ದಾರೆ.
ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ 2 ಸಾವಿರದ 120 ಮತಗಳ ಅಂತರದಲ್ಲಿ ಮುನ್ನಡೆ
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 3ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ 7422 ಮತಗಳ ಮುನ್ನಡೆ, ಶಿವಾಜಿನಗರ ಕ್ಷೇತ್ರದಲ್ಲಿ ಮತ ಎಣಿಕೆ ತಡವಾಗಿ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ನ ರಿಜ್ವಾನ್ ಅರ್ಷದ್ 582 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಯಲ್ಲಾಪುರ ಕ್ಷೇತ್ರದ 6ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಮುನ್ನಡೆ ಸಾಧಿಸಿದ್ದಾರೆ. ಇನ್ನು, ಹುಣಸೂರಿನಲ್ಲಿ ಮೂರನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್‌ನ ಜವರಾಯಿಗೌಡ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ರಿಜ್ವಾನ್ ಆರ್ಷದ್ ಮುನ್ನಡೆ
ವಿಜಯನಗರದಲ್ಲಿ ಬಿಜೆಪಿಯ ಆನಂದ್ ಸಿಂಗ್ 9 ಸಾವಿರದ 304 ಮತಗಳ ಅಂತರದಲ್ಲಿ ಮತ್ತು ಕಾಂಗ್ರೆಸ್ ನ ವೆಂಕಟರಾವ್ 6 ಸಾವಿರದ 40 ಮತಗಳನ್ನು ಗಳಿಸಿದ್ದಾರೆ.
ಹಿರೇಕೆರೂರು ಕ್ಷೇತ್ರದಲ್ಲಿ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ 2478 ಮತಗಳ ಮುನ್ನಡೆ
ಹೊಸಕೋಟೆಯಲ್ಲಿ ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡಗೆ 1700 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಹುಣಸೂರಿನಲ್ಲಿ ಸದ್ಯ ಮಂಜುನಾಥ್ ಕಾಂಗ್ರೆಸ್ ನಿಂದ 4 ಸಾವಿರದ 707 ಮತಗಳನ್ನು ಗಳಿಸಿದರೆ, ಬಿಜೆಪಿಯ ಎಚ್ ವಿಶ್ವನಾಥ್ 3,855 ಮತ್ತು ಜೆಡಿಎಸ್ ನ ದೇವರಹಳ್ಳಿ ಸೋಮಶೇಖರ್ 1,871 ಮತಗಳನ್ನು ಗಳಿಸಿದ್ದಾರೆ.