ರಾಘವೇಶ್ವರ ಶ್ರೀ ವಿರುದ್ಧದ 51 ಪ್ರಕರಣ ಕೈ ಬಿಡಲು ಸಂಪುಟ ಅನುಮೋದನೆ
ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ ಉತ್ತರ ಕನ್ನಡ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಿಸಿದ್ದ 50ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಗೋಕರ್ಣ ಠಾಣೆಯಲ್ಲಿ 2015 ರಲ್ಲಿ ದಾಖಲಿಸಿರುವ 51 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧು ಸ್ವಾಮಿ, ಸ್ವಾಮೀಜಿ ವಿರುದ್ಧ ಯಾವ ಯಾವ ಪ್ರಕರಣಗಳನ್ನು ಕೈ ಬಿಡಲಾಗಿದೆ ಎನ್ನುವ ಮಾಹಿತಿ ನೀಡಲು ನಿರಾಕರಿಸಿದರು.