ಒಂದು ವಾರ ರಾಜ್ಯಾದ್ಯಂತ ಶಾಲೆ-ಕಾಲೇಜ್,ಮಾಲ್, ಚಿತ್ರಮಂದಿರ ಬಂದ್
ಬೆಂಗಳೂರು:(ಉಡುಪಿ ಟೈಮ್ಸ್ ವರದಿ) ಮಾರಣಾಂತಿಕ ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಶುಕ್ರವಾರ ತುರ್ತು ಆದೇಶ ಹೊರಡಿಸಿದೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಒಂದು ವಾರಗಳ ಕಾಲ ಕ್ರೀಡಾ ಕಾರ್ಯಕ್ರಮಗಳು, ನೈಟ್ ಕ್ಲಬ್, ಪಬ್, ಮೇಳ, ಸೆಮಿನಾರ್ ಗಳು, ನಿಶ್ಚಿತಾರ್ಥ ಕಾರ್ಯಕ್ರಮಗಳು ಮತ್ತು ಜಾತ್ರೆಗಳನ್ನು ಬಂದ್ ಮಾಡಲಾಗುತ್ತಿದೆ. ಒಂದು ವಾರದ ನಂತರ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇಂದು ಬೆಳಗ್ಗೆಯಷ್ಟೇ ಕೊರೋನಾ ವೈರಸ್ ಹರಡದಂತೆ ತಡೆಯಲು ಮಾಲ್ ಗಳು, ಚಿತ್ರಮಂದಿರಗಳು ಹಾಗೂ ಎಲ್ಲಾ ಹವಾನಿಯಂತ್ರಿತ ಜಾಗಗಳನ್ನು ಬಂದ್ ಮಾಡುವಂತೆ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಲಬುರಗಿಯಲ್ಲಿ 76 ವರ್ಷದ ವೃದ್ಧರೊಬ್ಬರು ಮಂಗಳವಾರ ರಾತ್ರಿ ಮೃತಪಟ್ಟಿರುವುದು ಸೇರಿದಂತೆ ರಾಜ್ಯದಲ್ಲಿ ಒಟ್ಟಾರೇ ಆರು ಕೊರೋನಾ ವೈರಸ್ ಪ್ರಕರಣಗಳು ದೃಢಪಟ್ಟಿದೆ.
No doubt you instructed to close all above things but as a govt. you must give alternative to manage their day to day problems