ಮದ್ಯಕ್ಕೆ ಅಧಿಕ ದರ ವಸೂಲಿ ಮಾಡಿದರೆ ಲೈಸನ್ಸ್ ರದ್ದು : ಸಚಿವರ ಎಚ್ಚರಿಕೆ

ಮಂಗಳೂರು: ಜಿಲ್ಲೆಯ ಮದ್ಯದಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ  ಸಾರ್ವಜನಿಕರಿಂದ  ದೂರು  ಬರುತ್ತಿದೆ.  ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ಅವರು ಈ ಸಂಬಂಧ  ಜಿಲ್ಲಾಧಿಕಾರಿ ಕಚೇರಿ ನಡೆದ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ,  ಅಧಿಕ ದರ ವಸೂಲಿ ಮಾಡುವ ಪ್ರಕರಣ ಕಂಡು ಬಂದರೆ  ಅಂತಹ  ಮದ್ಯದಂಗಡಿಗಳ ಪರವಾನಿಗೆ ರದ್ದುಪಡಿಸಲು ಸೂಚನೆ ನೀಡಿದರು.

ಈ ಬಗ್ಗೆ ಅಬಕಾರಿ ಅಧಿಕಾರಿಗಳು ಎಲ್ಲಾ ಮದ್ಯದಂಗಡಿಗಳ  ಮೇಲೆ ನಿಗಾವಹಿಸಲು ಅವರು ಸೂಚಿಸಿದರು.ಅಬಕಾರಿ ಉಪ ಆಯುಕ್ತೆ ಶೈಲಜಾ ಕೋಟೆ ಮಾತನಾಡಿ,  ಮದ್ಯದಂಗಡಿ, ಬಾರ್ ಗಳಲ್ಲಿ ಅಧಿಕ ದರ ವಸೂಲಿ ಪ್ರಕರಣ  ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ತಿಳಿಸಿದರು

Leave a Reply

Your email address will not be published. Required fields are marked *

error: Content is protected !!