ಭಾಸ್ಕರ್‌ ರಾವ್‌ ನೇಮಕಕ್ಕೆ ತಡೆ ನೀಡಲು ಸಿಎಟಿ ನಕಾರ

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಭಾಸ್ಕರ್ ರಾವ್ ನೇಮಕಕ್ಕೆ ತಡೆ ನೀಡಲು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ನಿರಾಕರಿಸಿದೆ.

ತಮ್ಮ ಸ್ಥಾನಕ್ಕೆ ಭಾಸ್ಕರ್ ರಾವ್ ಅವರನ್ನು ನೇಮಿಸಿರುವುದನ್ನು ಪ್ರಶ್ನಿಸಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್‌ ಕುಮಾರ್ ಸಿಎಟಿ ಮೆಟ್ಟಿಲೇರಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಭಾಸ್ಕರ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಸಿಎಟಿ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *

error: Content is protected !!