ಟೆಲಿಪೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ -ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಇತ್ತೀಚಿಗೆ ರಾಜ್ಯ ರಾಜಕೀಯದಲ್ಲಿ  ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದ ಟೆಲಿಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.

ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಯಡಿಯೂರಪ್ಪ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಟೆಲಿಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದರು.  ಈ ಹಿನ್ನೆಲೆಯಲ್ಲಿ   ಸಿಬಿಐ ತನಿಖೆಗೆ ಆದೇಶಿಸಲಾಗಿದ್ದು, ಸಮಗ್ರ ತನಿಖೆ ನಡೆಸಲಾಗುವುದು, ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಟೆಲಿಪೋನ್ ಕದ್ದಾಲಿಕೆ ಆರೋಪ  ಕೇಳಿಬಂದಿತ್ತು. ಡಿಜಿ- ಐಜಿಪಿ ವರದಿಯಲ್ಲಿ ಪೋನ್ ಟ್ಯಾಪಿಂಗ್ ವಿವರವನ್ನು ಬಹಿರಂಗಗೊಳಿಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಶಾಸಕ ಆರ್. ಅಶೋಕ್ ಹಾಗೂ ಅನರ್ಹಗೊಂಡ 17 ಶಾಸಕರ ಪೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ ಟೆಲಿಪೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು  ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್  ಇತ್ತೀಚಿಗೆ  ಗಂಭೀರ ಆರೋಪ ಮಾಡಿದ್ದರು. ಅಲ್ಲದೇ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!