ಆಪರೇಷನ್ ಕಮಲವೂ ಸಿಬಿಐ ತನಿಖೆಯಾಗಲಿ : ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಎಂ ಯಡಿಯೂರಪ್ಪ ಅವರು ಸಿಬಿಐಗೆ ವಹಿಸುವುದಾಗಿ ನಿರ್ಧಾರ ಪ್ರಕಟಿಸುತ್ತಲೇ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಆಪರೇಷನ್ ಕಮಲವೂ ಸಿಬಿಐ ತನಿಖೆಗೆ ಒಳಪಡಲಿ,’ ಎಂದು ಆಗ್ರಹಿಸಿದ್ದಾರೆ.
‘ಪೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇತ್ತೀಚಿನ ‘ಆಪರೇಷನ್ ಕಮಲ’ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕು,’ ಎಂದು ಅವರು ಆಗ್ರಹಿಸಿದ್ದಾರೆ .