ಮೀನುಗಾರರಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್: ಯಶ್ಪಾಲ್ ಸುವರ್ಣ
ಉಡುಪಿ: ಆದಾಯ ತೆರಿಗೆ ಮಿತಿ ಹೆಚ್ಚಳ, ಡಿಜಿಟಲ್ ವ್ಯವಹಾರ, ಸ್ಟಾರ್ಟ್ ಅಪ್ ಉದ್ಯಮಕ್ಕೆ ಪ್ರೋತ್ಸಾಹ, ಜಿ ಎಸ್ ಟಿ ಸರಳೀಕರಣ, ಮುದ್ರಾ ಯೋಜನೆ ಮೂಲಕ ಮಹಿಳಾ ಉದ್ಯಮಿಗಳಿಗೆ ಸಾಲ, ರಸ್ತೆ ರೈಲ್ವೆ ಜಲಸಾರಿಗೆ ವಲಯದಲ್ಲಿ ಗರಿಷ್ಠ ಅನುದಾನದ ಮೂಲಕ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ, ದೇಶದ ಸರ್ವ ನಾಗರಿಕರ ಆಶಯಗಳಿಗೆ ಸ್ಪಂದಿಸುವ ಮೂಲಕ ದೇಶದ ಪ್ರಥಮ ಮಹಿಳಾ ಹಣಕಾಸು ಸಚಿವೆಯಾಗಿ ಆಶಾದಾಯಕ ಬಜೆಟ್ ಮಂಡಿಸಿರುವ ಶ್ರೀಮತಿ ನಿರ್ಮಲ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷ ಅಭಿನಂದನೆಗಳು.
ಮೀನುಗಾರಿಕಾ ವಲಯದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಘೋಷಿಸುವ ಮೂಲಕ ಮೀನುಗಾರರಲ್ಲಿ ಹೊಸ ಭರವಸೆ ಮೂಡಿದೆ.
ಪ್ರಸ್ತುತ ಬಜೆಟ್ನಲ್ಲಿ ಮೀನುಗಾರಿಕೆ ಹಾಗೂ ಪಶುಸಂಗೋಪನೆ ಸಚಿವಾಲಯಕ್ಕೆ 3737 ಕೋಟಿ ಮೀಸಲಿಡುವ ಮೂಲಕ ಮೀನುಗಾರರ ಬಹುದಿನದ ಬೇಡಿಕೆಗಳನ್ನು ಪೂರೈಸುವತ್ತ ಕೇಂದ್ರ ಸರಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.