“ಎನ್ಆರ್ ಸಿ” ವಿಸ್ತರಣೆಗೆ ಕೇಂದ್ರ ತಾತ್ಕಾಲಿಕ ಬ್ರೇಕ್?

ನವದೆಹಲಿ: ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡಲು ಅಸ್ಸಾಂ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್’ಸಿ)ಯನ್ನು ದೇಶದಾದ್ಯಂತ ವಿಸ್ತರಿಸಿರುವ ಉದ್ದೇಶದಿಂದ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಹಿಂದೆ ಸರಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಎನ್ಆರ್’ಸಿಯನ್ನು ದೇಶದಾದ್ಯಂತ ವಿಸ್ತರಿಸುವ ಕುರಿತು ಸರ್ಕಾರದಲ್ಲೇ ಚರ್ಚೆಗಳೇ ನಡೆದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿಕೆ ನೀಡಿದ್ದಾರೆ. 

ದೇಶದಾದ್ಯಂತ ವ್ಯಾಪ ಕು ಹೋರಾಟಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎನ್ಆರ್’ಸಿ ವಿಸ್ತರಣೆಯಿಂದ ಹಿಂದೆ ಸರಿಯುವ ತಂತ್ರಗಾರಿಕೆಯ ಸುಳಿವನ್ನು ಮೋದಿಯವರು ತಮ್ಮ ಹೇಳಿಕೆಯ ಮೂಲಕ ನೀಡಿದ್ದಾರೆಂದು ಹೇಳಲಾಗುತ್ತಿದೆ. 

ಅಕ್ರಮ ವಲಸೆ ತಡೆಗಟ್ಟಲು ಹಂತಹಂತವಾಗಿ ದೇಶದಲ್ಲಿ ಎನ್ಆರ್’ಸಿಯನ್ನು ಜಾರಿಗೆ ತರಲಾಗುವುದು ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶದಲ್ಲಿ ವ್ಯಕ್ತವಾದ ಪ್ರತಿಭಟನೆಯ ತೀವ್ರತೆ ತಮ್ಮನ್ನು ಅಚ್ಚರಿಗೆ ದೂಡಿದೆ ಎಂದು ಹಲವು ಬಿಜೆಪಿ ನಾಯಕರೇ ಒಪ್ಪಿಕೊಳ್ಳುತ್ತಿದ್ದಾರೆ. 

ಎನ್ಆರ್’ಸಿ ಕುರಿತಂತೆ ಸಮಾಜದ ಒಂದು ವರ್ಗ ಅದರಲ್ಲೂ ವಿಶೇಷವಾಗಿ ಮುಸ್ಲಿಮರಲ್ಲಿ ಇದ್ದ ಕಳವಳ ಪ್ರತಿಭಟನೆಗೆ ಶಕ್ತಿ ತುಂಬಿದೆ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ದೆಹಲಿ ರ್ಯಾಲಿ ಮೂಲಕ ಮೋದಿಯವರು ಎನ್ಆರ್’ಸಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಬೇರೆ ಬೇರೆ ಎಂಬ ಸಂದೇಶ ರವಾನಿಸಿದ್ದಾರೆ. ಇಂತಹ ಕ್ರಮವನ್ನು ಇಲ್ಲಿಯವರೆಗೂ ಸರ್ಕಾರ ತೆಗೆದುಕೊಂಡಿರಲಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ. 

ಪ್ರಸ್ತುತದ ಪರಿಸ್ಥಿತಿಯಲ್ಲಿ ಎನ್ಆರ್’ಸಿ ಕತೆಯೇನು ಎಂಬ ಪ್ರಶ್ನೆಗೆ ಉತ್ತರಿಸಿರುವ ಬಿಜೆಪಿ ನಾಯಕರೊಬ್ಬರು, ಮೋದಿ ಅವರ ಹೇಳಿಕೆಯಿಂದಲೇ ಸ್ಫಷ್ಟ ಉತ್ತರ ಲಭಿಸಿದೆ. ಹೀಗಾಗಿ ಬಿಜೆಪಿ ನಾಯಕರು ಎನ್ಆರ್’ಸಿ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯೆಂತೂತ ಸದ್ಯದ ಸ್ಥಿತಿಯಲ್ಲಿಲ್ಲ ಎಂದು ತಿಳಿಸಿದ್ದಾರೆ. 

2021ಕ್ಕೆ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಅಲ್ಲಿ ಎನ್ಆರ್’ಸಿಯೇ ಪ್ರಮುಖ ವಿಷಯವಾಗಲಿದೆ. ಬೇಕಿದ್ದರೆ, ಪಶ್ಚಿಮ ಬಂಗಾಳದಲ್ಲಿ ಮಾತ್ರ ಆ ವಿಷಯ ಪ್ರಸ್ತಾಪಿಸಿ ಇತರೆಡೆ ಅದರ ಬಗ್ಗೆ ಚಕಾರವೆತ್ತದಿರುವ ಅವಕಾಶವೂ ಪಕ್ಷದ ಮುಂದಿದೆ ಎಂದು ಮತ್ತೊಬ್ಬ ನಾಯಕರು ತಿಳಿಸಿದ್ದಾರೆ. 

ಅಸ್ಸಾಂನಲ್ಲಿ ಜಾರಿಗೆ ತರಲಾಗಿರುವ ಎನ್ಆರ್’ಸಿಯನ್ನು ದೇಶದಾದ್ಯಂತ ವಿಸ್ತರಿಸಲಾಗುತ್ತದೆ ಎಂದು ಡಿ.9ರಂದ ಗೃಹ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಘೋಷಣೆ  ಮಾಡಿದ್ದರು. 

ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಕೂಡ ಎನ್ಆರ್’ಸಿ ವಿಸ್ತರಣೆಯಾಗಲಿದೆ ಎಂದು ಹೇಳುತ್ತಲೇ ಬಂದಿದ್ದರು. ಆದರೆ, ಭಾನುವಾರದ ರ್ಯಾಲಿಯಲ್ಲಿ ಎನ್ಆರ್’ಸಿ ಬಗ್ಗೆ ಸಂಸತ್ತುಸ ಸಚಿವ ಸಂಪುಟದಲ್ಲಿ ಚರ್ಚೆಯೇ ಆಗಿಲ್ಲ ಎನ್ನುವ ಮೂಲಕ ಮೋದಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!