ಬೇಟಿ ಬಚಾವೊ ಬೇಟಿ ಪಡಾವೊ ಹೆಸರಿನಲ್ಲಿ ವಂಚನೆ- ಎಚ್ಚರಿಕೆ

 

ಉಡುಪಿ : ಬೇಟಿ ಬಚಾವೊ ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ  2 ಲಕ್ಷ ರೂ. ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು/ಸ್ವಯಂ ಸೇವಾ ಸಂಸ್ಥೆಗಳ/ವ್ಯಕ್ತಿಗಳು ಹೆಣ್ಣು ಮಕ್ಕಳ ವೈಯುಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿರುತ್ತದೆ.

ಸಾರ್ವಜನಿಕ ಗಮನಕ್ಕೆ: ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಅನಧಿಕೃತ ಸಂಸ್ಥೆಗಳು/ ವ್ಯಕ್ತಿಗಳು ಈ ಯೋಜನೆಯಡಿ ಹಣವನ್ನು ನೀಡುವುದಾಗಿ ಭರವಸೆ ನೀಡಿ ಸಾರ್ವಜನಿಕರನ್ನು ಮೋಸ ಮಾಡುತ್ತಿವೆ. ಈ ರೀತಿ ವಂಚನೆ ಮಾಡುವ ಅಥವಾ ಪ್ರಚಾರ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ವಂಚನೆಗಳು ಬೆಳಕಿಗೆ ಬಂದಾಗಲೆಲ್ಲಾ ಎಫ್.ಐ.ಆರ್ ಗಳನ್ನು ಈಗಾಗಲೇ ನೊಂದಾಯಿಸಲಾಗಿದೆ. ಇಂತಹ ವಂಚಕರ ಬಲೆಗೆ ಬೀಳದಂತೆ ಸಾರ್ವಜನಿಕರಿಗೆ ಸಲಹೆ/ಸೂಚನೆ ನೀಡಲಾಗಿದೆ. ಈ ಯೋಜನೆಯಡಿ ವಂಚಕರು ನಮೂನೆಯಲ್ಲಿ ಕೋರುವ ಯಾವುದೇ ವೈಯುಕ್ತಿಕ ವಿವರಗಳನ್ನು ಅಂದರೆ ಆಧಾರ್ ಕಾರ್ಡ್, ಬ್ಯಾಂಕ್ ವಿವರಗಳು, ದೂರವಾಣಿ/ಮೊಬೈಲ್ ಸಂಖ್ಯೆ/ಇ-ಮೇಲ್ ಐ.ಡಿ/ ಇತರೆ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಬಾರದು. ಇಂತಹ ವಂಚನೆ ಮಾಡುವ ವ್ಯಕ್ತಿಗಳ/ಸಂಸ್ಥೆಗಳ ಹೆಸರನ್ನು ಪೊಲೀಸ್ ಠಾಣೆಗೆ ತಿಳಿಸುವಂತೆ, ಸ್ನೇಹಿತರು, ಸಂಬಂಧಿಕರು ಹಾಗೂ ನಿಮ್ಮನ್ನು ಸಂಪರ್ಕಿಸುವ ಎಲ್ಲರಿಗೂ ಇಂತಹ ವಂಚಕರ ವಿರುದ್ಧ ಜಾಗರೂಕರಾಗಿರುವಂತೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!