ಮಂಗಳೂರಿನಲ್ಲಿ ಮತ್ತೆ ಪೌರತ್ವದ ಕಿಚ್ಚು: ಬೃಹತ್ ಸಮಾವೇಶ,ಬಿಗಿ ಭದ್ರತೆ
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ.
ಪ್ರತಿಭಟನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಗಳಿದ್ದು, ಕರಾವಳಿಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಭದ್ರೆತೆಗೆ 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜನೆಗೊಳಿಸಲಾಗಿದೆ.
ಪ್ರತಿಭಟನೆ ಹಿನ್ನೆಲೆ ಬೆಳಿಗ್ಗೆ 8ರಿಂದ ರಾತ್ರಿ 10ವರೆಗೆ ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರವನ್ನೂ ಬದಲು ಮಾಡಲಾಗಿದೆ.
ಡಿ.19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದು, ಈ ವೇಳೆ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಯುವಕರಿಬ್ಬರು ಸಾವನ್ನಪ್ಪಿದ್ದರು, ಅಲ್ಲದೆ, ಹಲವರಿಗೆ ಗಾಯಗಳಾಗಿದ್ದವು.