ಉಡುಪಿ:ರಾಜೀವ್ ಗಾಂಧಿ ಪಂಚಾಯತ್ ರಾಜ್ ವತಿಯಿಂದ ವಿಚಾರ ಸಂಕೀರ್ಣ

ಉಡುಪಿ: ಫೆ6 ಗುರುವಾರ ಅಜ್ಜರಕಾಡು ಪುರಭವನದಲ್ಲಿ ಬೆಳಿಗ್ಗೆ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಪೌರತ್ವ ಸಂರಕ್ಷಣಾ ವಿಚಾರ ಸಂಕೀರ್ಣವನ್ನು ಏರ್ಪಡಿಸಲಾಗಿದೆ. ಕೇಂದ್ರ ಸರಕಾರವು ಜಾರಿಗೊಳಿಸಲು ಉದ್ದೇಶಿಸಿರುವ ಸಂವಿಧಾನ ವಿರೋಧಿ ಕಾಯ್ದೆಗಳಾದ ಸಿಎಎ, ಎನ್.ಆರ್.ಸಿ., ಎನ್.ಪಿ.ಆರ್ ಗಳಿಂದ ಉದ್ಭವಿಸಬಹುದಾದ ದುಷ್ಪರಿಣಾಮಗಳನ್ನು ತಿಳಿಯಪಡಿಸುವ ಹಾಗೂ ನಮ್ಮೆಲ್ಲರ ಪೌರತ್ವವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಈ ವಿಚಾರ ಸಂಕೀರ್ಣವನ್ನು ಏರ್ಪಡಿಸಿದ್ದು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಕುಮಾರಿ ಮೀನಾಕ್ಷಿ ನಟರಾಜನ್, ವಿಧಾನ ಸಭೆಯ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್, ಕೆ.ಪಿ.ಸಿ.ಸಿ. ವಕ್ತಾರರು ಮಾಜಿ ಸಂಸದರಾದ ಉಗ್ರಪ್ಪ, ಸಾಮಾಜಿಕ ಹೋರಾಟಗಾರರು ಶಿವ್ ಸುಂದರ್ ಇವರುಗಳು ಸಮಗ್ರ ಮಾಹಿತಿ ನೀಡಲಿದ್ದಾರೆ.


ಈ ವಿಚಾರ ಸಂಕೀರ್ಣದಲ್ಲಿ ಮಾನ್ಯ ರಾಜ್ಯಸಭಾ ಸದಸ್ಯರಾದ ಓಸ್ಕರ್ ಫೆರ್ನಾಂಡಿಸ್, ಎಐಸಿಸಿ ಕಾರ್ಯದರ್ಶಿಗಳಾದ ವಿಷ್ಣುನಾಥನ್, ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್, ಆರ್.ಜಿ.ಪಿ.ಆರ್.ಎಸ್. ರಾಜ್ಯ ಸಂಚಾಲಕರಾದ ರಂಗ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ವಿಜಯ್ ಸಿಂಗ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್.ಸಭಾಪತಿ ಭಾಗವಹಿಸಲಿರುವರು.


ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರುಗಳು, ಮುಖಂಡರು, ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು ಹಾಗೂ ಸದಸ್ಯರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ ಹಾಗೂ ಚುನಾಯಿತ ಜನ ಪ್ರತಿನಿಧಿಗಳು, ಬೂತ್ ಅಧ್ಯಕ್ಷರು, ಬಿಎಲ್.ಎ.ಗಳು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಿತೈಷಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ರೋಶನಿ ಒಲಿವರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!