ಮಾ.23ಕ್ಕೆ ವಾರ್ಷಿಕ ಪರೀಕ್ಷೆ ಮುಗಿಸಿ, ಬಳಿಕ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿವರೆಗಿನ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 16 ರ ಒಳಗೆ ಹಾಗೂ 6 ರಿಂದ 9 ನೇ ತರಗತಿ ಪರೀಕ್ಷೆಗಳನ್ನು ಮಾರ್ಚ್ 23 ರ ಒಳಗೆ ಕಡ್ಡಾಯವಾಗಿ ಎಲ್ಲಾ ವಾರ್ಷಿಕ ಪರೀಕ್ಷೆ ಮುಗಿಸಿ ರಜೆ ಘೋಷಿಸುವಂತೆ ಎಲ್ಲಾ ಬಿಇಒಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ರವಾನೆ ಮಾಡಿದೆ.

ಕೊರೊನಾ ಭೀತಿ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದ್ದು, ಪೂರ್ವ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ.

ಯಾವುದೇ ವಿದ್ಯಾರ್ಥಿ ಜ್ವರ ,ಕೆಮ್ಮು  ನೆಗಡಿ ಅಥವಾ ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಅಂತಹ ವಿದ್ಯಾರ್ಥಿಗೆ ಆರೋಗ್ಯ ಮತ್ತು ಕುಟುಂಬ ಇಲಾಖೆಯ ವತಿಯಿಂದ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಿ ಕಡ್ದಾಯ ರಜೆ ಘೋಷಿಸಬೇಕು ಎಂದು ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಿದೆ.

1 thought on “ಮಾ.23ಕ್ಕೆ ವಾರ್ಷಿಕ ಪರೀಕ್ಷೆ ಮುಗಿಸಿ, ಬಳಿಕ ಶಾಲೆಗಳಿಗೆ ರಜೆ ಘೋಷಣೆ

  1. Bengaluru: In the wake of the coronation scandal, the 1st and 5th standard exams will be completed by March 16 and the 6th to 9th grade exams will be completed by March 23.

Leave a Reply

Your email address will not be published. Required fields are marked *

error: Content is protected !!