ಎಚ್ಡಿಕೆಯಿಂದ ಕಾಂಗ್ರೆಸ್ ಮುಖಂಡ ರಾಮಲಿಂಗ ರೆಡ್ಡಿ ಭೇಟಿ , ರಾಜಕೀಯ ವಲಯದಲ್ಲಿ ಕೆರಳಿದ ಕೂತೂಹಲ
ಬೆಂಗಳೂರು: ನಿರ್ಗಮಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ರಾಮಲಿಂಗಾರೆಡ್ಡಿ ಅವರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ನಗರದ ಲಕ್ಕಸಂದ್ರದಲ್ಲಿರುವ ರಾಮಲಿಂಗಾರೆಡ್ಡಿ ಅವರ ಮನೆಯಲ್ಲಿ ಕುಮಾರಸ್ವಾಮಿ ಉಪಾಹಾರ ಸೇವಿಸಿದ್ದರು.
ಇದೇ ವೇಳೆ ಶಾಸಕಿ ಸೌಮ್ಯಾರೆಡ್ಡಿ ಅವರೂ ಇದ್ದರು. ಸದ್ಯದ ರಾಜಕೀಯ ವಿಧ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
‘ಸುಭದ್ರ ಸರ್ಕಾರ ನೀಡಲು ಸಾಧ್ಯವಿಲ್ಲ’
ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಕೂಡ (ಬಿಜೆಪಿ) ಸುಭದ್ರ ಸರ್ಕಾರ ನೀಡಲು ಸಾಧ್ಯವಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ರಾಮಲಿಂಗಾರೆಡ್ಡಿಯವರು ಸರ್ಕಾರವನ್ನು ಬೆಂಬಲಿಸಿ ರಾಜೀನಾಮೆ ಹಿಂಪಡೆದಿದ್ದರು. ಸದನದಲ್ಲಿ ವಿಶ್ವಾಸಮತ ಯಾಚನೆ ವೇಳೆ ಅವರ ಬದ್ಧತೆ ಕುರಿತು ಮಾತನಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಇಂದು ಅವರ ಮನೆಗೆ ಭೇಟಿ ನೀಡಿ ಉಪಾಹಾರ ಸೇವಿಸಿದ್ದೇನೆ ಎಂದು ಹೇಳಿದರು.
‘ರಾಜೀನಾಮೆ ಅಂತರೀಕ ವಿಚಾರ’
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷದ ಅಂತರಿಕ ವಿಚಾರವಾಗಿತ್ತು ಎಂದು ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.