ಕ್ಯಾಮೆರಾಮನ್ ಗೆ ಕೊರೋನಾ ಸೋಂಕು, 30ಕ್ಕೂ ಹೆಚ್ಚು ಪತ್ರಕರ್ತರಿಗೆ ಕ್ವಾರಂಟೈನ್

ಬೆಂಗಳೂರು: ಬೆಂಗಳೂರಿನ ಸುದ್ದಿ ವಾಹಿನಿಯೊಂದರ ಕ್ಯಾಮೆರಾಮನ್ ಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕ ಹೊಂದಿರುವ 30ಕ್ಕೂ ಹೆಚ್ಚು ಪತ್ರಕರ್ತರಿಗೆ ಹೋಂ ಕ್ವಾರಂಟೈನ್ ನಲ್ಲಿರುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ.

ಖಾಸಗಿ ವಾಹಿನಿಯ ಕ್ಯಾಮೆರಾಮೆನ್ ಆಗಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿಯಲ್ಲಿ ಶನಿವಾರ ಸೋಂಕು ದೃಡಪಟ್ಟಿದೆ. ಈ ಅವರೊಂದಿಗೆ ಸಂಪರ್ಕದಲ್ಲಿದ್ದ ವಿವಿಧ ಸುದ್ದಿ ವಾಹಿನಿಗಳ ವರದಿಗಾರರು ಸೇರಿದಂತೆ 30ಕ್ಕೂ ಹೆಚ್ಚು ಪ್ರತ್ರಕರ್ತರನ್ನು ಕ್ವಾರಂಟೈನ್ ಮಾಡಲಾಗಿದೆ.

ಈ ಪರೀಕ್ಷೆಯಲ್ಲಿ ಕ್ಯಾಮೆರಾಮನ್ ಗೆ ಸೋಂಕು ಕಂಡುಬಂದಿರುವುದರಿಂದ ಆತನನ್ನು ಕೊವಿಡ್-19 ಚಿಕಿತ್ಸೆಗಾಗಿ ಮೀಸಲಿರಿಸಲಾಗಿರುವ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಸಂಪರ್ಕ ಹಾಗೂ ಪ್ರಯಾಣದ ವಿವರಗಳನ್ನು ಇನ್ನೂ ಪತ್ತೆಹಚ್ಚಬೇಕಿದೆ.

Leave a Reply

Your email address will not be published. Required fields are marked *

error: Content is protected !!