ಕೊರೊನಾ ಮಾದರಿ ಪರೀಕ್ಷೆ: ಉಡುಪಿ ನಂಬರ್ ಒನ್
ಉಡುಪಿ: ಕೊರೊನಾ ಸೋಂಕು ಮಾದರಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಕೊರೊನಾ ಮಾದರಿ ಟೆಸ್ಟಿಂಗ್ ಕುರಿತು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಜಿಲ್ಲಾವಾರು ಮಾಹಿತಿಯ ಬಿಡುಗಡೆಯಾಗಿದ್ದು, ಉಡುಪಿ ಜಿಲ್ಲೆ 11,77,361 ಜನಸಂಖ್ಯೆ ಹೊಂದಿದ್ದು, 403 ಕೊರೊನಾ ಮಾದರಿ ಪರೀಕ್ಷೆ ಮಾಡಲಾಗಿದ್ದು, ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಹೋಲಿಸಿದರೆ 34 ಮಾದರಿ ಪರೀಕ್ಷೆಗಳನ್ನು ನಡೆಸಿದಂತಾಗಿದೆ. ಈ ಪ್ರಮಾಣ ರಾಜ್ಯದಲ್ಲೇ ಅತಿ ಹೆಚ್ಚು ಎಂದು ತಿಳಿಸಿದೆ.
ಎರಡನೇ ಸ್ಥಾನದಲ್ಲಿ ಬಾಗಲಕೋಟೆ ಜಿಲ್ಲೆ ಇದ್ದು, 18,89,752 ಜನಸಂಖ್ಯೆಯ ಪೈಕಿ 625 ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. ಒಂದು ಲಕ್ಷ ಜನಸಂಖ್ಯೆಗೆ ಹೋಲಿಸಿದರೆ ಪರೀಕ್ಷೆಗಳ ಪ್ರಮಾಣ 33 ಇದೆ.
ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ದಕ್ಷಿಣ ಕನ್ಡ, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಉತ್ತರ ಕನ್ನಡ, ಬಳ್ಳಾರಿ, ಕೊಡಗು, ಕೊಪ್ಪಳ, ಗದಗ, ಕಲಬುರ್ಗಿ, ತುಮಕೂರು ಜಿಲ್ಲೆಗಳಿದ್ದು, ಸ್ಯಾಂಪಲ್ ಪರೀಕ್ಷೆಯಲ್ಲಿ ಕ್ರಮವಾಗಿ ನಂತರದ ಸ್ಥಾನಗಳಲ್ಲಿವೆ.