ದೆಹಲಿಯಿಂದ ಹಿಂತಿರುಗಿದ್ದ ಉಪ್ಪಿನಂಗಡಿಯ ಯುವಕನಲ್ಲಿ ಕೊರೊನಾ ಪಾಸಿಟಿವ್ ಪತ್ತೆ
ಮಂಗಳೂರು:ಇತ್ತೀಚೆಗೆ ದೆಹಲಿಯಿಂದ ಹಿಂತಿರುಗಿದ್ದಉಪ್ಪಿನಂಗಡಿಯ ಯುವಕನಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಮಾ.28 ರಂದು ದೆಹಲಿಯಿಂದ ಹಿಂತಿರುಗಿದ್ದ 39 ವರ್ಷದ ಯುವಕನಿಗೆ 14 ದಿನಗಳ ಕಾಲ ಕ್ವಾರೆಂಟೈನ್ ನಲ್ಲಿ ಚಿಕಿತ್ಸೆ ನೀಡಲಾಗುತಿತ್ತು . ಏ.2 ರಂದು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಇತನ ವರದಿ ನೆಗೆಟಿವ್ ಬಂದಿತ್ತು. ಎರಡನೇ ಬಾರಿ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಿದ ಮಾದರಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ತಕ್ಷಣ ಯುವಕನನ್ನು ವೆನ್ ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 13 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದ್ದು, ಈ ಪೈಕಿ 9 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.