ಕೊರೊನಾ ವೈರಸ್ ಭೀತಿ: ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಾಟ, ಹಲವೆಡೆ ದಾಳಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡದಂತೆ ರಕ್ಷಿಸಿಕೊಳ್ಳಲು ಸಾರ್ವಜನಿಕರು ಮಾಸ್ಕ್ ಬಳಸುತ್ತಿದ್ದು ಮುಖಗವಸುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಔಷಧ ನಿಯಂತ್ರಕರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 104ಕ್ಕೆ ಸಾರ್ವಜನಿಕರಿಂದ ಸ್ವೀಕೃತವಾದ ಕರೆಗಳನ್ನು ಆಧರಿಸಿ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿರುವುದು ವರದಿಯಾಗಿದೆ.

ಮಾಸ್ಕ್, ಸ್ಯಾನಿಟೈಸರ್ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ಮನವಿ
ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಜನರು ಮುಖಗವಸು ಬಳಕೆಗೆ ಮುಂದಾಗಿದ್ದು ಮಾಸ್ಕ್, ಸ್ಯಾನಿಟೈಸರ್ ಗಳನ್ನು ನಿಗದಿತ ಬೆಲೆ (ಎಂ ಆರ್ ಪಿ) ಬೆಲೆಯಲ್ಲಿ ಮಾರಾಟ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!