ಕೊರೋನಾ: ಮುಂಜಾಗ್ರತ ಕ್ರಮ ಪಾಲನೆ ಮಾಡದಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ
ಉಡುಪಿ: (ಉಡುಪಿ ಟೈಮ್ಸ್ ವರದಿ) ಕೊರೋನಾ ವೈರಸ್ ಹರಡದಂತೆ ಸರ್ಕಾರ ಕೈಗೊಂಡ ಮುಂಜಾಗ್ರತ ಕ್ರಮವನ್ನು ಸರಿಯಾಗಿ ಸಾರ್ವಜನಿಕರು ಪಾಲನೆ ಮಾಡದಿರುವುದರಿಂದ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೊರೋನಾ ವೈರಸ್ ಹರಡದಂತೆ ಜಿಲ್ಲಾಡಳಿತ ನಿರ್ದೇಶನಗಳನ್ನು ಸಾರ್ವಜನಿಕರು ಕಟ್ಟಿನಿಟ್ಟಿನಲ್ಲಿ ಪಾಲಿಸದ ಪರಿಣಾಮ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಜಿಲ್ಲೆಯಾದ್ಯಂತ ಮಾ.18 ರಿಂದ ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಆದೇಶ ಜಾರಿಗೊಳಿಸಿದ್ದಾರೆ.
ಉತ್ಸವ/ಸಾಮೂಹಿಕ ವಿವಾಹಗಳು ಹಾಗೂ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ ಸೋಂಕು ಹರಡುವ ಸಾಧ್ಯತೆಹೆಚ್ಚು ಇರುವ ಕಾರಣ ಸದ್ರಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ನಿಯಂತ್ರಿಸುವುದು ಅಗತ್ಯವೆಂದು ಮನಗಂಡು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಸಿ.ಆರ್.ಪಿ.ಸಿ ಸೆಕ್ಷನ್ 144(3) ರ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿದ್ದಾರೆ .
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸೇರಿದ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ/ ಜಾತ್ರೆ ಕೋವಿಡ್ -೧೯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಜಾತ್ರೆಗಳು, ಸಭೆ ಸಮಾರಂಭಗಳು , ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತ / ಜಾತ್ರ/ ಉತ್ಸವ/ಸಾಮೂಹಿಕ ವಿವಾಹಗಳು ಹಾಗೂ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚು ಇರುವ ಕಾರಣದಿಂದ ಸರ್ಕಾರದ ಆದೇಶದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಾ.18 ರಿಂದ ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.