ಕೊರೊನಾ ವೈರಸ್ ಪಾಸಿಟಿವ್ 606: ಸಾವಿನ ಸಂಖ್ಯೆ 13ಕ್ಕೆ

ನವದೆಹಲಿ: ದೇಶದ ವಿವಿಧೆಡೆ ಕೊರೊನಾವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಬುಧವಾರ 606ಕ್ಕೆ ಮುಟ್ಟಿದೆ. ಮಂಗಳವಾರ ಈ ಸಂಖ್ಯೆ 519 ಇತ್ತು. ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ‘ಕೋವಿಡ್-19’ನಿಂದ ಮೃತಪಟ್ಟಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ದೇಶದ ವಿವಿಧೆಡೆ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13 ತಲುಪಿದೆ. ಈ ಪೈಕಿ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಮೃತಪಟ್ಟ ಮಹಿಳೆಯ ಪ್ರಯೋಗಾಲಯದ ಪರೀಕ್ಷೆ ವರದಿ ಇನ್ನೂ ಬರಬೇಕಿದೆ. 

ವಾರಾಣಸಿ ಕ್ಷೇತ್ರದ ಜನರೊಂದಿಗೆ ವಿಡಿಯೊ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಮತ್ತು ವಿಮಾನ ಯಾನ ಸಂಸ್ಥೆಗಳ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು 

Leave a Reply

Your email address will not be published. Required fields are marked *

error: Content is protected !!