ರಾಜ್ಯದಲ್ಲಿ ಮತ್ತೆ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ

ಬೆಂಗಳೂರು: ನಿನ್ನೆ ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರಲ್ಲಿ ಕೊರೋನಾ ವೈರಸ್ ಪತ್ತೆಯಾಗಿತ್ತು. ಇದೀಗ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು ಕಳೆದ 24 ಗಂಟೆಯಲ್ಲಿ ನಾಲ್ಕು ಪ್ರಕರಣ ಪತ್ತೆಯಾಗಿದೆ. 

ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಟ್ವೀಟರ್ ಇದುವರೆಗೂ ಕರ್ನಾಟಕದಲ್ಲಿ 4 ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಟ್ವೀಟಿಸಿದ್ದಾರೆ. 

ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರಿದ್ದಾರೆ.

ಟೆಕ್ಕಿ, ಪತ್ನಿ, ಮಗು ಮತ್ತು ಸಹೋದ್ಯೋಗಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂವರಿಗೂ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Leave a Reply

Your email address will not be published. Required fields are marked *

error: Content is protected !!