ದಲಿತ ದೌರ್ಜನ್ಯ ಪ್ರಕರಣ ‘ಐಜಿಪಿಗೆ ತನಿಖೆ ನಡೆಸಲು ಕೋರ್ಟ್ ಸೂಚನೆ’ 
ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ ಲಿಖಿತ ದೂರು ಕೊಟ್ಟರೂ ಎಫ್‌ಐಆರ್ ದಾಖಲು ಮಾಡದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ನ್ಯಾಯಾಲಯ ಪ್ರಕರಣಗಳ ತನಿಖೆಯನ್ನು ಪಶ್ಚಿಮ ವಲಯ ಐಜಿಪಿಗೆ ಹಸ್ತಾಂತರಿಸಿದೆ ಎಂದು ದಲಿತ ಮುಖಂಡ ಶೇಖರ್ ಹಾವಂಜೆ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಮೇಲಾಗುವ ದೌರ್ಜನ್ಯ, ಕಿರುಕುಳಗಳ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆ, ಡಿವೈಎಸ್ಪಿ, ಎಸ್‌ಪಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಹಾಗಾಗಿ ವಕೀಲರ ಮೂಲಕ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ ಎಂದರು.
ಬ್ರಹ್ಮಾವರ ಠಾಣೆಯಲ್ಲಿ ಲಿಖಿತವಾಗಿ ದೂರು ಕೊಟ್ಟರೂ ಎಫ್‌ಐಆರ್ ದಾಖಲಿಸಿಕೊಳ್ಳಲಿಲ್ಲ. ಈ ವಿಚಾರವನ್ನು ಡಿವೈಎಸ್ಪಿ ಜೈಶಂಕರ್, ಎಸ್‌ಪಿ ನಿಶಾ ಜೇಮ್ಸ್ ಅವರ ಗಮನಕ್ಕೆ ತರಲಾಗಿತ್ತು. ಆದರೂ ಕ್ರಮ ತೆಗೆದುಕೊಳ್ಳಲಿಲ್ಲ. ಪಡುಬಿದ್ರೆ ಹಾಗೂ ಕಾರ್ಕಳ ನಗರ ಠಾಣೆಯಲ್ಲೂ ಇದೇರೀತಿ ಆಗಿತ್ತು. ಈ ಮೂರು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು.
ವಕೀಲ ಸತೀಶ್ಚಂದ್ರ ಕಾಳಾವರ್ಕರ್ ಮಾತನಾಡಿ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಸಾಕಷ್ಟು ಕಾನೂನುಗಳಿವೆ. ಆದರೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಕಾನೂನು ಅರಿವಿನ ಕೊರತೆ ಇದ್ದು, ಇದರಿಂದ ದಲಿತರಿಗೆ ಅನ್ಯಾಯವಾಗುತ್ತಿದೆ. ದೌರ್ಜನ್ಯ ಕಾಯ್ದೆ ದುರ್ಬಳಕೆ ಆಗುತ್ತಿದೆ ಎಂದರು.