ಕೃಷ್ಣಮೃಗ ಬೇಟೆ ಪ್ರಕರಣ: ಕೋರ್ಟ್‌ನಿಂದ ಸಲ್ಮಾನ್ ಖಾನ್‌ಗೆ ಎಚ್ಚರಿಕೆ
ಜೈಪುರ: 1998ರ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧ ಜೋಧ್ ಪುರ ಸೆಷನ್ ಕೋರ್ಟ್ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವಿಚಾರಣೆಗೆ ಹಾಜರಾಗದಿದ್ದರೆ ಜಾಮೀನು ರದ್ದು ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದೆ.
ಸಲ್ಮಾನ್ ಖಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ವಿಚಾರಣೆಗೆ ಗೈರಾಗುತ್ತಿದ್ದುದ್ದರಿಂದ ಆಕ್ರೋಶಗೊಂಡಿರುವ ನ್ಯಾಯಾಲಯ ಸಲ್ಮಾನ್ ಖಾನ್‌ಗೆ ಎಚ್ಚರಿಕೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಜೋಧ್ ಪುರ ನ್ಯಾಯಾಲಯದ ನ್ಯಾಯಮೂರ್ತಿ ಚಂದ್ರಕುಮಾರ್ ಸೊಂಗಾರ ಅವರು, ಮುಂದಿನ ವಿಚಾರಣೆಗೆ ಸಲ್ಮಾನ್ ಖಾನ್ ಖುದ್ಧು ಹಾಜರಾಗಬೇಕು. ಇಲ್ಲವಾದಲ್ಲಿ ಅವರಿಗೆ ನೀಡಿರುವ ಜಾಮೀನು ಅನ್ನು ನಿರಾಕರಿಸಲಾಗುತ್ತದೆ ಎಂದು ಹೇಳಿದ್ದಾರೆ.
“ಹಮ್ ಸಾಥ್ ಸಾಥ್ ಹೈ” ಚಿತ್ರದ ಶೂಟಿಂಗ್ ಸಮಯದಲ್ಲಿ ಜೋಧಪುರದಲ್ಲಿ ಕೃಷ್ಣಮೃಗಗಳನ್ನು ಕೊಂದ ಆರೋಪದಲ್ಲಿ ಕಳೆದ ವರ್ಷ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಆದರೆ ಸಲ್ಮಾನ್ ಖಾನ್ ಅವರು ಜೋಧ್‌ಪುರ ಜೈಲಿನಲ್ಲಿ ಎರಡು ರಾತ್ರಿ ಕಳೆದ ನಂತರ ನ್ಯಾಯಾಲಯ ಅವರಿಗೆ ಜಾಮೀನು ನೀಡಿತು.