ಸೈಬರ್ ಅಪರಾಧ ಪತ್ತೆ ಸವಾಲಿನ ಕೆಲಸ: ಎಸ್‌ಪಿ ನಿಶಾ

ಉಡುಪಿ – ಇತ್ತೀಚಿನ ದಿನಗಳಲ್ಲಿ ದಿನನಿತ್ಯದ ಅಪರಾಧ ಚಟುವಟಿಕೆಗಳಿಗಿಂತಲೂ ಸೈಬರ್ ಅಪರಾಧ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಗೆ ಇದರ ಜಾಡು ಹಿಡಿಯುವುದು ಸವಾಲಿನ ಕೆಲಸವಾಗಿದೆ. ಅನಾಮಧೇಯ ಮೊಬೈಲ್ ಸಂಖ್ಯೆಗಳು, ವಾಹನಗಳ ನಕಲಿ ನೋಂದಣಿಗಳನ್ನು ಅಕ್ರಮ ಚಟುವಟಿಕೆಗಳಿಗೆ ಉಪಯೋಗಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಹೇಳಿದರು.


ಬುಧವಾರ ಲೆಕ್ಕಪರಿಶೋಧಕರ ಶಾಖೆಯಲ್ಲಿ ನಡೆದ ಸೈಬರ್ ಕ್ರೈಂ ಮತ್ತು ಅಪರಾಧ ತಡೆ ರಕ್ಷಣೆ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿರುವಂತೆ ಅಪರಾಧ ಪ್ರಕರಣ ಕೂಡ ಅಧಿಕವಾಗುತ್ತಿವೆ. ಮಹಾನಗರಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿ. ನೆಟ್ ಬ್ಯಾಂಕಿಂಗ್, ಆ್ಯಪ್‌ಗಳ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳ ಅತಿ ಬಳಕೆಯಿಂದ ಇಂತಹ ಘಟನೆಗಳು ನಡೆಯುತ್ತಿವೆ.

ಜಿಲ್ಲೆಯಲ್ಲೂ ಎಟಿಎಂ ಕಾರ್ಡ್ ಸ್ಕಿಮ್ಮಿಂಗ್ ಪ್ರಕರಣಗಳು ಕಂಡು ಬಂದಿವೆ ಎಂದರು. ಸೈಬರ್ ಕ್ರೈಂ ಚಟುವಟಿಕೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಲೆಕ್ಕಪರಿಶೋಧಕರ ಸಂಸ್ಥೆಯ ಅಧ್ಯಕ್ಷ ನರಸಿಂಹ ನಾಯಕ್ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಅಜಿತ್ ವಿ.ಪಾಲ್, ಕಾರ್ಯದರ್ಶಿ ಕವಿತಾ ಎಂ.ಪೈ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!