ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಸೇವೆಗೆ ಶುಕ್ರವಾರ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಟಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.
ವೈಯಕ್ತಿಕ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸ್ಪಷ್ಟಪಡಿಸಿರುವ ಸಸಿಕಾಂತ್ ಸೆಂಥಿಲ್, ತನ್ನ ರಾಜೀನಾಮೆಗೆ ಯಾವುದೇ ವ್ಯಕ್ತಿ ಅಥವಾ ಸದ್ಯ ತಾನು ಸೇವೆ ಸಲ್ಲಿಸುತ್ತಿರುವ ದ.ಕ. ಜಿಲ್ಲಾಧಿಕಾರಿ ಅವಧಿಯಲ್ಲಿನ ಯಾವುದೇ ಘಟನೆ ಕಾರಣವಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.
“ನಮ್ಮ ವೈವಿಧ್ಯ ಪ್ರಜಾಪ್ರಭುತ್ವದ ಮೂಲಭೂತ ರಚನೆಗಳ ಜೊತೆ ಹಿಂದೆಂದೂ ಕಂಡಿರದ ರೀತಿಯಲ್ಲಿ ರಾಜಿ ಮಾಡಿಕೊಳ್ಳುವಾಗ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ನನಗೆ ಅನೈತಿಕವೆಂದು ಎನಿಸಿದ ಕಾರಣ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ದೇಶದ ಮೂಲ ಚೌಕಟ್ಟುಗಳು ಅತ್ಯಂತ ಕಷ್ಟಕರ ಸವಾಲುಗಳನ್ನು ಎದುರಿಸಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಆದ್ದರಿಂದ ನಾನು ಐಎಎಸ್ ನಿಂದ ಹೊರಬಂದು ನನ್ನ ಕೆಲಸ ಮುಂದುವರಿಸಿ ಎಲ್ಲರಿಗೂ ಒಳ್ಳೆಯದನ್ನು ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮೊದಲು ಇವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಪರ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದ ಸೆಂಥಿಲ್, ಜಿಲ್ಲೆಯ ಸರ್ವರ ಪ್ರೀತಿಗೆ ಪಾತ್ರರಾಗಿದ್ದರು. ವೈಯುಕ್ತಿಕ ಕಾರಣಗಳನ್ನು ನೀಡಿ ತಮ್ಮಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಕೂಡ ವೈಯಕ್ತಿಕ ಕಾರಣಗಳನ್ನು ಮುಂದಿಟ್ಟು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು
What??? Without starts any developments he decides to quit??