ದ.ಕ.-ಬೆಂಗಳೂರು ಸೇರಿ 9 ಜಿಲ್ಲೆ ಮಾರ್ಚ್ 31ರ ವರೆಗೆ ಲಾಕ್‌ಡೌನ್

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತುರ್ತು ಸಭೆ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ‌ನಾಳೆಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದುಗೊಳಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ,  ಬೆಳಗಾವಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 31ರ ವರೆಗೆ ಲಾಕ್‌ಡೌನ್ ಮುಂದುವರಿಯಲಿದೆ. ಈ 9 ಜಿಲ್ಲೆಗಳಲ್ಲಿ ವೈದ್ಯಕೀಯ, ಔಷದಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಸಾರಿಗೆ ಸೇರಿದಂತೆ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಈ 9 ಜಿಲ್ಲೆಗಳಲ್ಲಿ ಕಾರ್ಮಿಕರು ಹೆಚ್ಚಿರುವ ಕೈಗಾರಿಕೆಗಳಲ್ಲಿ, ದಿನ ಬಿಟ್ಟು ದಿನ ಅರ್ಧ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸಬೇಕು. ಈ 9 ಜಿಲ್ಲೆಗಳಲ್ಲಿ ಅಂತರ ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು ಮಾರ್ಚ್ 31ರರವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇಂದು ರಾತ್ರಿ 9 ಗಂಟೆಗೆ ಜನತಾ ಕರ್ಫ್ಯೂ ಮುಗಿಯಲಿದೆ. ಆದರೆ ರಾತ್ರಿ 9 ಗಂಟೆಯಿಂದ 12 ಗಂಟೆಯವರೆಗೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ 

Leave a Reply

Your email address will not be published. Required fields are marked *

error: Content is protected !!