ಕುಡಿಯುವ ನೀರು- ತತ್‌ಕ್ಷಣವೇ ಸ್ಪಂದಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗದಂತೆ ಕಾರ್ಯಪ್ರವೃತ್ತರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.

ಅವರು ಸೋಮವಾರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ನೀರು ಪೂರೈಕೆ ಆಗುವಂತೆ ಗ್ರಾ.ಪಂ. ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸನ್ನದ್ಧ ಸ್ಥಿತಿಯಲ್ಲಿದ್ದು ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಗ್ರಾ.ಪಂ., ಹಾಸ್ಟೆಲ್‌, ಸರಕಾರಿ ಕಟ್ಟಡ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸುವ ಬಗ್ಗೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿ.ಪಂ. ಸಿಇಒ ಸಿಂಧೂ ಬಿ. ರೂಪೇಶ್‌, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸಂತೋಷ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!