ಜಿಲ್ಲಾಧಿಕಾರಿ ರಾಜೀನಾಮೆ : ದಕ್ಷಿಣ ಕನ್ನಡ ಜಿಲ್ಲೆಗೆ ಕಪ್ಪು ಚುಕ್ಕೆ : ಸುಶೀಲ್ ನೊರೊನ್ನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭಾರತೀಯ ಆಡಳಿತ ಸೇವೆಗೆ ರಾಜೀನಾಮೆ ನೀಡಿರುವುದು ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಿಲ್ಲಾಧಿಕಾರಿ ಕಳೆದ ಎರಡು ವರ್ಷಗಳಲ್ಲಿ ಈ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ಮಹತ್ವದ ಬೆಳವಣಿಗೆಗೆ ಪಾತ್ರರಾಗಿದ್ದಾರೆ. ನಿಷ್ಠಾವಂತ ಜಿಲ್ಲಾಧಿಕಾರಿಯ ರಾಜೀನಾಮೆ ನಿಜಕ್ಕೂ ಬೇಸರದ ಸಂಗತಿ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ಸುಶೀಲ್ ನೊರೊನ್ನ ತಿಳಿಸಿದ್ದಾರೆ.
ಇಡೀ ರಾಷ್ಟ್ರ ಮಟ್ಟದಲ್ಲಿ ಜಿಲ್ಲೆಯ ಸುದ್ದಿ ಪ್ರಸಾರವಾಗುತ್ತಿದ್ದು, ಪ್ರಜ್ಞಾವಂತ ಮತ್ತು ವಿದ್ಯಾವಂತ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಜನಸ್ನೇಹಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಕಪ್ಪು ಚುಕ್ಕೆಯಾಗಿದೆ. ನಮ್ಮ ಭಾರತ ದೇಶದ ಪ್ರಜಾಪ್ರಭುತ್ವದ ಸೊಗಸನ್ನು ನೀಡುತ್ತಿರುವ ರಾಜ್ಯಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಗಳು ಇಂತಹ ಘಟನೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಬೇಕಾಗಿದೆ ಎಂದು ಸುಶೀಲ್ ನೊರೊನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.