ಕಾಡಾನೆ ಹಾವಳಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ : ಅಗತ್ಯ ಕ್ರಮದ ಭರವಸೆ

ಮಡಿಕೇರಿ : ಕಾಡಾನೆ ಉಪಟಳ ಹೆಚ್ಚಾಗಿರುವ ವಿರಾಜಪೇಟೆ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಿಣಿ ಜಾಯ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ಕಾಡಾನೆ ಹಾವಳಿಗೆ ತುತ್ತಾಗಿರುವ ಬಿರುನಾಣಿ, ಪರಕಟಗೇರಿ, ತೆರಾಲು, ಕುರ್ಚಿ, ಮಂಚಳ್ಳಿ ಹಾಗೂ ಶ್ರೀಮಂಗಲ ಪ್ರದೇಶಗಳಿಗೆ ತೆರಳಿದ ಜಿಲ್ಲಾಧಿಕಾರಿ,  ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

 ವನ್ಯಜೀವಿಗಳ ಉಪಟಳದಿಂದ ಸ್ಥಳೀಯರು ಅನುಭವಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯನ್ನು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ವಿವರಿಸಿದರು.

ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು ಕಾಡಾನೆ ಹಾವಳಿ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!