ಪ್ರಾಕೃತಿಕ ವಿಕೋಪದಿಂದಾಗಿ ಹಾನಿಗೊಳಗಾದ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ
ಉಡುಪಿ: ಜಿಲ್ಲಾಧಿಕಾರಿಯವರಾದ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯತ್ ಸಿಂಧು ಬಿ ರೂಪೇಶ್ . ಇಂದು ಉಡುಪಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದಾಗಿ ಹಾನಿಗೊಳಗಾದಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ತಾಲೂಕು ಬೆಳ್ಳಂಪಳ್ಳಿ ಗ್ರಾಮದಲ್ಲಿ ಭೀಕರ ಮಳೆಯಿಂದಾಗಿ ಸೀತಾ ಶೆಡ್ತಿ ಇವರ ಮನೆ ಮೇಲೆ ತೆಂಗಿನ ಮರ ಬಿದ್ದು ಆಸ್ತಿ ಹಾನಿಯಾಗಿರುವ ಬಗ್ಗೆ ಪರಿಶೀಲನೆ ನಡೆಸಿದರು.
ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮದಲ್ಲಿ ಮಳೆ ಗಾಳಿಯಿಂದಾಗಿ ಗೋಪಿ ಪೂಜಾರಿ ಇವರ ವಾಸ್ತವ್ಯದ ಮನೆಗೆ ಹಾನಿಯಾಗಿದ್ದು ಈ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕರು, ಕೋಟ ಹೋಬಳಿ ಹಾಗೂ ಗ್ರಾಮಲೆಕ್ಕಾಧಿಕಾರಿಯವರು ಹಾಜರಿದ್ದರು.
ಕುಂದಾಪುರ ತಾಲೂಕು ಗೋಪಾಡಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿರುವ ನೀರಿನ ಟ್ಯಾಂಕ್ನ್ನು ಪರಿಶೀಲನೆ ನಡೆಸಿದರು. ಕುಂದಾಪುರ ತಾಲೂಕು ಹೊಂಬಾಡಿ- ಮಂಡಾಡಿ ಗ್ರಾಮದ ರುಕ್ಮಿಣಿ ಕುಲಾಲ್ತಿ ಇವರ ವಾಸ್ತವ್ಯದ ಮನೆಯು ದಿನಾಂಕ: 22-07-2019 ರ ಸಂಜೆ ಬೀಸಿದ ಗಾಳಿ ಮಳೆಗೆ ಹಾನಿಯಾಗಿರುವುದನ್ನು ಪರಿಶೀಲಿಸಿದರು. ಮಳೆಯ ಪ್ರಮಾಣದ ಬಗ್ಗೆ , ಮಳೆಯಿಂದ ಸ್ಥಳೀಯ ಮಟ್ಟದಲ್ಲಿ ಸಂಭವಿಸಬಹುದಾದ ಹಾಗೂ ಮಳೆಯಿಂದಾಗಿ ರಾತ್ರಿ ಸಂಭವಿಸಿರುವ ಅವಘಡಗಳು ಬಗ್ಗೆ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರರು, ಕುಂದಾಪುರ , ರಾಜಸ್ವ ನಿರೀಕ್ಷಕರು ಕುಂದಾಪುರ ಹಾಗೂ ಗ್ರಾಮಲೆಕ್ಕಾಧಿಕಾರಿಯವರು ಹಾಜರಿದ್ದರು.