ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರ ದೀಕ್ಷಿತ್ ಪೂಜಾರಿ ಬಂಧನ
ಮಂಗಳೂರು : ಮಂಗಳೂರು ನಗರ ಮತ್ತು ಉಡುಪಿ ಸೇರಿದಂತೆ ಏಳು ಪ್ರಕರಣಗಳಲ್ಲಿ ಎರಡು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರಂಟು ಆರೋಪಿ. ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರ ದೀಕ್ಷಿತ್ ಪೂಜಾರಿ(31), ಎಂಬಾತನನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಟಿ.ಕೋದಂಡರಾಮ್ ನೇತೃತ್ವದ ರೌಡಿ ನಿಗ್ರಹ ದಳ ಸಿಬ್ಬಂದಿಯವರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ನಿಡ್ಡೆಲ್ ಮರೋಳಿಯ ದೀಕ್ಷಿತ್ ಪೂಜಾರಿ(31) ದಸ್ತಗಿರಿಯಾದತಾ . ಈತನ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ,ಶೂಟೌಟ್ ಪ್ರಕರಣ ಸೇರಿದಂತೆ ಮೂರು ಪ್ರಕರಣ, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ ಮತ್ತು ಹಲ್ಲೆ ಪ್ರಕರಣ ಮತ್ತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಉರ್ವಾ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಉಡುಪಿ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ ಮತ್ತು ಕಾವೂರು ಠಾಣಾ ಪ್ರಕರಣ ಸೇರಿದಂತೆ ಸುಮಾರು 11 ದಾಖಲಾಗಿರುತ್ತದೆ. ಉಡುಪಿ ನಗರ, ಉಳ್ಳಾಲ, ಕಾವೂರು, ಮಂಗಳೂರು ಪೂರ್ವ, ಬರ್ಕೆ ಮತ್ತು ಪಾಂಡೇಶ್ವರ ಪೊಲೀಸ್ ಠಾಣೆ ಸೇರಿದಂತೆ ಏಳು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಯ ಪತ್ತೆಯ ಬಗ್ಗೆ ನ್ಯಾಯಾಲಯವು ಈತನ ಮೇಲೆ ವಾರಂಟು ಹೊರಡಿಸಿಲಾಗಿತ್ತು . ಆರೋಪಿಯ ಮುಂದಿನ ಕ್ರಮದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ. ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಡಾ:ಪಿ.ಎ.ಹರ್ಷಾ, ಐ.ಪಿ.ಎಸ್. ರವರ ನಿರ್ದೇಶನದಂತೆ, ಅರುಣಾಂಕ್ಷು ಗಿರಿ, ಐಪಿಎಸ್ ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಲಕ್ಷ್ಮೀ ಗಣೇಶ್, ಡಿ.ಸಿ.ಪಿ (ಅಪರಾಧ ಮತ್ತು ಸಂಚಾರ ವಿಭಾಗ) ರವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಟಿ.ಕೋದಂಡರಾಮ್ ರವರ ಆದೇಶದಂತೆ ದಕ್ಷಿಣ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.