ಎಸ್ ಡಿಸಿಸಿ ಬ್ಯಾಂಕ್ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಕಾಪು: ಎಸ್.ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಸ್ವಸಹಾಯ ಸಂಘಗಳ ಪ್ರೇರಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಕಾಪು ಬಿಲ್ಲವರ ಸಂಘದ ಸಭಾಂಗಣದಲ್ಲಿ ಇಂದು ನಡೆಯಿತು. ಆಶಾ ಕಾರ್ಯಕರ್ತೆಯವರಿಗೆ ಒಂದು ಸಾವಿರ ಗೌರವ ಧನವನ್ನು ಅವರ ಖಾತೆಗೆ ಜಮಾ ಮಾಡಲಾಗುವುದೆಂದು ಎಸ್.ಸಿ .ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರ ಆಶಯವನ್ನು ಸಭೆಗೆ ದೇವಿ ಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು..
ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ತಹಸೀಲ್ದಾರ್ ಮೊಹಮದ್ ಐಸಾಕ್. ಕಾಪು ಆರೋಗ್ಯ ಅಧಿಕಾರಿ ಮತ್ತು ಎಸ್.ಸಿ .ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಡಾ. ದೇವಿ ಪ್ರಸಾದ್ ಶೆಟ್ಟಿ ,ರಾಜೇಶ್ ರಾವ್ ಪಾಂಗಳ, ಸಹಕಾರಿ ದುರೀಣರಾದ ಕೆ.ದಿವಾಕರ ಶೆಟ್ಟಿ, ವೈ.ಸುಧೀರ್ ಕುಮಾರ್ ಪಡುಬಿದ್ರಿ, ಕುತ್ಯಾರು ಪ್ರಸಾದ್ ಶೆಟ್ಟಿ ಶಿರ್ವ, ಶಿವಾಜಿ ಸುವರ್ಣ ಬೆಳ್ಳೆ ಶೇಖರ್ ಕಟಪಾಡಿ ಉಪಸ್ಥಿತರಿದ್ದರು.