ಕರಾವಳಿಗೆ ದುಬೈ ಕಂಟಕ… ಇಂದು 16 ಮಂದಿಗೆ ಕೊರೋನಾ ಸೋಂಕು ದೃಢ: ಸುರತ್ಕಲ್ ಸಿಲ್ ಡೌನ್!

ಮಂಗಳೂರು: ಇದೇ 12 ರಂದು ದುಬೈನಿಂದ ಮಂಗಳೂರಿಗೆ ಮರಳಿದ್ದ 15 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಬ್ಬರು ತೀವ್ರ ಉಸಿರಾಟದ ತೊಂದರೆಯಿಂದ (ಎಸ್ಎಆರ್‌ಬಿಐ) ಬಳಲುತ್ತಿದ್ದಾರೆ.

ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, ದುಬೈನಿಂದ ಆಗಮಿಸಿ ಪ್ರಯಾಣಿಕರ ಪೈಕಿ 15 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮೂರು ಮಂದಿ ಈ ಪೈಕಿ 45 ವರ್ಷದ ಗಂಡ, 33 ವರ್ಷದ ಹೆಂಡತಿ 6 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂರು ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ವಿಮಾನದಲ್ಲಿ 38 ಮಂದಿ ಗರ್ಭಿಣಿಯರು ಬಂದಿದ್ದುಇವರಲ್ಲಿ ಸೋಂಕು ಕಂಡುಬಂದಿಲ್ಲ. ಅದರೂ ಮುನ್ನೆಚ್ಚರಿಕಾ ಕ್ರಮವಾಗಿ ನೆಗೆಟಿವ್ ಬಂದ ಎಲ್ಲಾ ಪ್ರಯಾಣಿಕರ 12ನೇ ದಿನದಂದು ಸ್ವಾಬ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಸುರತ್ಕಲ್ ಮೂಲದ ಮಹಿಳೆಗೆ ಯಾವ ಮೂಲದಿಂದ ಸೋಂಕು ಹರಡಿದೆ ಎಂದು ಇನ್ನು ಖಚಿತವಾಗಿಲ್ಲ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ತೀವ್ರ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸಿದಾದ ಸೋಂಕು ಖಚಿತವಾಗಿದೆ.

ಇನ್ನು ಮೇ 18 ರಂದು ದುಬೈನಿಂದ ಮತ್ತೊಂದು ವಿಮಾನ ಬರಲಿದ್ದು, 171 ಮಂದಿ ಪ್ರಯಾಣಿಕರು ಮಂಗಳೂರಿಗೆ ಬರುವ ಪ್ರಾಥಮಿಕ ಮಾಹಿತಿ ಬಂದಿದೆ. ಆದರೆ ಒಟ್ಟು ಎಷ್ಟು ಸಂಖ್ಯೆಯಲ್ಲಿ ಬರಲಿದ್ದಾರೆ ಎಂಬುವುದು ದ.ಕ ಜಿಲ್ಲಾಡಳಿತಕ್ಕೆ ಮಾಹಿತಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ. 

ಇದೀಗ ವಿಮಾನದಲ್ಲಿ ಬಂದ ಇತರ ಪ್ರಯಾಣಿಕರ ಆರೋಗ್ಯದ ಮೇಲೂ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!