ಸೋಮೇಶ್ವರದ ಮಹಿಳೆಗೆ ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 951ಕ್ಕೇರಿಕೆ
ಮಂಗಳೂರು: ಬುಧವಾರ ಮತ್ತೆ ಫಸ್ಟ್ ನ್ಯೂರೋ ಸಂಪರ್ಕದಿಂದ ಉಳ್ಳಾಲದ ಸೋಮೇಶ್ವರದ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ. ಮಹಿಳೆಗೆ ಫಸ್ಟ್‌ನ್ಯೂರೋ ಸಂಪರ್ಕದಿಂದ ಸೋಂಕು ತಗುಲಿದ್ದ ರೋಗಿ ಸಂಖ್ಯೆ ಪಿ-507 ಸಂಪರ್ಕದಿಂದ ಸೋಂಕು ತಗುಲಿದ್ದು ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ವೆನ್ಲಾಕ್ ಕೊರೊನಾ ಆಸ್ಪತ್ರೆಗೆ ರವಾನಿಸಲಾಗಿದೆ. ಫಸ್ಟ್‌ನ್ಯೂರೋದಲ್ಲಿ ಚಿಕಿತ್ಸೆ ಪಡೆದಿದ್ದ ಮಹಿಳೆ ಮತ್ತು ಸೊಸೆ ಕೊರೊನಾದಿಂದಾಗಿ ಮೃತಪಟ್ಟ ಬಳಿಕ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿತ್ತು.ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದೆ.
ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.
ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 32 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.
ಕಲಬುರಗಿಯಲ್ಲಿ 2, ಬೆಂಗಳೂರು ನಗರದಲ್ಲಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ 2, ಬಳ್ಳಾರಿಯಲ್ಲಿ 1, ಬೀದರ್ ನಲ್ಲಿ 11, ದಾವಣಗೆರೆಯಲ್ಲಿ 2, ವಿಜಯಪುರದಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಹಾಸನದ 4 ಪ್ರಕರಣಗಳು ವರದಿಯಾಗಿವೆ.
ಜಯಪುರಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿದ ವ್ಯಕ್ತಿಗಳು, ಹಾಸನಕ್ಕೆ ಪ್ರಯಾಣ ಬೆಳೆಸಿದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಉತ್ತರ ಕನ್ನಡದ ಓರ್ವರು ಮಹಾರಾಷ್ಟ್ರದ ರತ್ನಗಿರಿಗೆ ಪ್ರಯಾಣ ಬೆಳೆಸಿದ ಹಿನ್ನೆಲೆಯ ಹೊಂದಿದ್ದಾರೆ.