ದ.ಕ.: ಮತ್ತೆ ಒಂದೇ ಗ್ರಾಮದ ಮೂರು ಮಂದಿಗೆ ಕೊರೋನಾ ಪಾಸಿಟಿವ್
ಮಂಗಳೂರು: ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಹರಡಿದ ಸೋಂಕಿನಿಂದ ಬಂಟ್ವಾಳದ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢವಾಗಿದೆಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಇದರಲ್ಲಿ ಇಬ್ಬರು ಮಹಿಳೆಯ( 70 , 60 ವರ್ಷ) ಮತ್ತು ಓರ್ವ ಪುರುಷನ (30ವರ್ಷ) ಗಂಟಲ ದ್ರವದ ವರದಿಯಲ್ಲಿ ಸೋಂಕು ಪಾಸಿಟಿವ್ ಬಂದಿದೆ.
ಮೇ.1ರಂದು ಕೊರೋನ ಪತ್ತೆಯಾಗಿದ್ದ 69 ವರ್ಷದ P-578 ವೃದ್ದನಿಂದ ತಗುಲಿದ ಸೋಂಕು ವೃದ್ದನ ಕುಟುಂಬದ ಮೂರು ಜನರಲ್ಲಿ ಸೋಂಕು ಪತ್ತೆ. ಬಂಟ್ವಾಳದಲ್ಲಿ ಮೃತಪಟ್ಟ P-390 ಮಹಿಳೆಯಿಂದ ವೃದ್ದನಿಗೆ ತಗುಲಿದ್ದ ಸೋಂಕು ಬಂಟ್ವಾಳ ಕಸಬಾದ ಮೃತ ಮಹಿಳೆಯ ಸಂಬಂಧಿಕರು ಮತ್ತು ನೆರೆಮನೆಯವರಾಗಿರುವ ವೃದ್ದ. ವೃದ್ದನಿಗೆ ಪಾಸಿಟಿವ್ ಹಿನ್ನೆಲೆ ಆ ಮನೆಯ 8 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಸದ್ಯ ಮೂವರಿಗೆ ಸೋಂಕು ದೃಢ ಪಟ್ಟಿದೆ.
ಮಂಗಳೂರಿನ ಫಸ್ಟ್ ನ್ಯೂರೋ ಸಂಪರ್ಕದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಸದ್ಯ ದ.ಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಕ್ಕೆ ಏರಿಕೆ, ಈವರೆಗೆ ಪತ್ತೆಯಾದ ಪಾಸಿಟಿವ್ ಪ್ರಕರಣಗಳು 31 ಆಗಿದ್ದು,ಇವರೆಗೆ ಮೂವರು ಮೃತಪಟ್ಟಿದ್ದಾರೆ. 13 ಜನ ಸೋಂಕಿನಿಂದ ಸಂಪೂರ್ಣ ಗುಣಮುಖವಾಗಿದ್ದಾರೆ.