ದ.ಕ.: ಮಾ.31ರವರೆಗೆ ಖಾಸಗಿ ಬಸ್ ಸಂಚಾರ ಸ್ಥಗಿತ

ಮಂಗಳೂರು: ಕೊರೋನ ವೈರಸ್ ಮಂಗಳೂರಿಗೆ ಹಬ್ಬಿರುವ ಮತ್ತು ರಾಜ್ಯದ 9 ಜಿಲ್ಲೆಗಳಲ್ಲಿ ‘ಶಟ್‌ಡೌನ್’ ನಡೆಯಲಿರುವ ಕಾರಣ ಮಾ.31ರವರೆಗೆ ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.


ಜಿಲ್ಲಾಡಳಿತ ಸೂಚನೆಯ ಮೇರೆಗೆ ಸಂಚಾರ ಸ್ಥಗಿತಗೊಳಿಸಲಾಗುವುದು . ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಬಸ್ ಸಂಚಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!