ದ.ಕ.ಜಿಲ್ಲೆಯನ್ನು ಸೀಲ್ ಡೌನ್ ಮಾಡಿಲ್ಲ, ಅನಗತ್ಯ ಗೊಂದಲ ಸೃಷ್ಟಿಸುವ ದೃಶ್ಯ ಮಾಧ್ಯಮ: ಡಿಸಿ


ಮಂಗಳೂರು: ಮಂಗಳೂರು ನಗರವನ್ನು ಸೀಲ್ ಡೌನ್ ಮಾಡಲಾಗಿದೆ ಎಂಬ ವದಂತಿಗಳು ಸೃಷ್ಟಿಯಾಗಿದ್ದು, ಶುಕ್ರವಾರ ರಾಜ್ಯ ಮಟ್ಟದ ಖಾಸಗಿ ಟಿವಿ ಚಾನೆಲ್ ಸೀಲ್ ಡೌನ್ ಕುರಿತು ಪ್ರಸಾರ ಮಾಡುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಯಾ ಮಂಗಳೂರು ನಗರದಲ್ಲಾಗಲಿ ಇವರೇಗೆ ಯಾವುದೇ ಸೀಲ್ ಡೌನ್ ಮಾಡುವ ಪ್ರಕ್ರಿಯೆ ನಡೆದಿಲ್ಲ ಎಂದಿದ್ದಾರೆ.
ಅಧಾರ ರಹಿತ ಸುದ್ದಿಗಳ ಪ್ರಸಾರದಿಂದ ಸಾರ್ವಜನಿಕರಲ್ಲಿ ಆತಂಕ, ಗೊಂದಲ ಮೂಡಿಸುತ್ತಿದೆ. ಜಿಲ್ಲೆಯಲ್ಲಿ ಲಾಕ್ ಡೌನ್ ಮಾತ್ರ ಜಾರಿಯಲ್ಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಪ್ರಕ್ರಿಯೆ ಜಾರಿಯಲ್ಲಿದೆ. ಇದನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!