ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ.ಹೆಚ್.ಅಶೋಕ್

ಉಡುಪಿ: ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ.ಹೆಚ್.ಅಶೋಕ್ (ಎಂಬಿಬಿಎಸ್) ಅಧಿಕಾರ ವಹಿಸಿಕೊಂಡಿದ್ದಾರೆ. ಸುಮಾರು 17 ವರ್ಷಗಳಿಂದ ವಿವಿಧ ಕಡೆಗಳಲ್ಲಿ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ. ಅಶೋಕ್ ಅವರು ಈ ಹಿಂದೆ ಉಡುಪಿ ತಾಲೂಕು ಆರೋಗ್ಯಾಧಿಕಾರಿಯಾಗಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಯಾಗಿ, ದಕ್ಷಿಣಕನ್ನಡ ಜಿಲ್ಲಾ ಆರ್‌ಸಿಎಚ್‌ಒ ಆಗಿ ಕೂಡಾ ಕರ್ತವ್ಯ ನಿರ್ವಹಿಸಿದ್ದರು. ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಅತ್ಯುತ್ತ್ತಮ ಡಾಪ್ಕೂ ಪ್ರಶಸ್ತಿ ಹಾಗೂ ಸರ್ವೋತ್ತಮ ದೇವ ಪ್ರಶಸ್ತಿಯನ್ನು ಕೂಡಾ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!